Advertisement

ಉಡುಪಿಯ ಇಎಸ್‌ಐ ಆಸ್ಪತ್ರೆ ನಿರ್ವಹಣೆ: ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ

11:12 PM Jan 11, 2023 | Team Udayavani |

ಉಡುಪಿ: ಜಿಲ್ಲೆಗೆ ಮಂಜೂರಾಗಿರುವ 100 ಹಾಸಿಗೆಯ ಇಎಸ್‌ಐ ಆಸ್ಪತ್ರೆಯ ನಿರ್ವಹಣೆಯನ್ನು ರಾಜ್ಯ ಸರಕಾರದಿಂದ ನಡೆಸಲು ಅನುಮತಿ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪರಿಶೀಲನೆ ಹಂತದಲ್ಲೇ ಉಳಿದುಬಿಟ್ಟಿದೆ.

Advertisement

ಈ ಆಸ್ಪತ್ರೆಯ ನಿರ್ವಹಣೆಯನ್ನು ರಾಜ್ಯ ಸರಕಾರಕ್ಕೆ ನೀಡುವಂತೆ ಇಎಸ್‌ಐ ನಿಗಮದ ಬೆಂಗಳೂರಿನ ಪ್ರಾದೇಶಿಕ ಕಚೇರಿಯ ಮೂಲಕ ದಿಲ್ಲಿಯಲ್ಲಿರುವ ಇಎಸ್‌ಐ ನಿಗಮದ ಕೇಂದ್ರ ಕಚೇರಿಗೆ ರಾಜ್ಯ ಸರಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೆ ರಾಜ್ಯ ಸರಕಾರವೇ ಈ ಆಸ್ಪತ್ರೆಯ ನಿರ್ವಹಣೆಗೆ ತಾಂತ್ರಿಕ ಸಮಸ್ಯೆಯೂ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

ಸ್ಥಳ ಪರಿಶೀಲನೆ
ಕಾರ್ಮಿಕ ವರ್ಗಕ್ಕೆ ಅನುಕೂಲವಾಗುವಂತೆ ಇಎಸ್‌ಐ ನಿಗಮದಿಂದ 100 ಹಾಸಿಗೆಯ ಇಎಸ್‌ಐ ಆಸ್ಪತ್ರೆಯನ್ನು ಕೆಲವು ತಿಂಗಳ ಹಿಂದೆ ಜಿಲ್ಲೆಗೆ ಮಂಜೂರು ಮಾಡಲಾಗಿತ್ತು. ಅದರಂತೆ ಬ್ರಹ್ಮಾವರದ ಇಂದಿರಾನಗರದಲ್ಲಿ ಸುಮಾರು 5 ಎಕರೆ ಜಾಗವನ್ನು ಈ ಉದ್ದೇಶಕ್ಕಾಗಿ ಜಿಲ್ಲಾಡಳಿತದಿಂದ ಮೀಸಲಿ ಡಲಾಗಿದೆ. ನಿಗಮದ ಪ್ರಾದೇಶಿಕ ಕಚೇರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿಗಳಿಗೆ ವರದಿ
ರಾಷ್ಟ್ರೀಯ ಹೆದ್ದಾರಿಯಿಂದ ಆಸ್ಪತ್ರೆ ನಿರ್ಮಾಣವಾಗುವ ಪ್ರದೇಶದ ವರೆಗಿನ ಕೂಡು ರಸ್ತೆ ಸಮರ್ಪಕವಾಗಿಲ್ಲ. ಜಿಲ್ಲಾಡಳಿತದಿಂದ ಕೂಡು ರಸ್ತೆಯನ್ನು ಮಾಡಿಕೊಟ್ಟಲ್ಲಿ ಮುಂದಿನ ಕ್ರಮ ಕೈಗೊಳ್ಳಲು ಅನುಕೂಲ ವಾಗಲಿದೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳುವಂತೆ ಸ್ಥಳ ಪರಿಶೀಲನೆ ನಡೆಸಿದ್ದ ನಿಗಮದ ಪ್ರಾದೇಶಿಕ ಕಚೇರಿಯ ಅಧಿಕಾರಿಗಳು ವರದಿಯನ್ನು ಉಡುಪಿ ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು. ಜಿಲ್ಲಾಡಳಿತದಿಂದ ಈ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ವನ್ನು ನಿಗಮಕ್ಕೆ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರಕಾರದ ನಿರ್ವಹಣೆ ಏಕೆ?
ಬಹುತೇಕ ಇಎಸ್‌ಐ ಆಸ್ಪತ್ರೆಗಳನ್ನು ಇಎಸ್‌ಐ ನಿಗಮ ದಿಂದಲೇ ನಿರ್ವಹಣೆ ಮಾಡ ಲಾಗುತ್ತದೆ. ಉಡುಪಿಯಲ್ಲಿ ಹೊಸದಾಗಿ ನಿರ್ಮಾಣ ವಾಗುತ್ತಿರುವುದರಿಂದ ಆರಂಭ  ದಲ್ಲೇ ರಾಜ್ಯ ಸರಕಾರ ಇದರ ನಿರ್ವ ಹಣೆಯನ್ನು ಪಡೆದು ಕೊಂಡಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ದೊರೆಯಲಿದೆ. ಅಲ್ಲದೆ ಸಿಬಂದಿ ಆಯ್ಕೆ ಪ್ರಕ್ರಿಯೆಯಲ್ಲೂ ಸ್ಥಳೀಯರಿಗೆ ಅವಕಾಶ ಸಿಗಲಿದೆ. ನಿಗಮವೇ ನಿರ್ವಹಣೆ ಮಾಡಿದಲ್ಲಿ, ಆಯ್ಕೆ ಪ್ರಕ್ರಿಯೆ ಹಾಗೂ ನೇಮಕಾತಿ ರಾಷ್ಟ್ರ ಮಟ್ಟದಲ್ಲೆ ನಡೆಯಬೇಕು. ಇದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಕೈತಪ್ಪುವ ಸಾಧ್ಯತೆಯೂ ಇದೆ. ಹೀಗಾಗಿ ರಾಜ್ಯ ಸರಕಾರ ನಿರ್ವಹಣೆ ಪಡೆಯಬೇಕು ಎಂಬ ಒತ್ತಾಯವೂ ಇದೆ.

Advertisement

ಸದ್ಯ ಜಿಲ್ಲೆಯ ಉಡುಪಿ, ಮಣಿಪಾಲ, ಕಾರ್ಕಳ ಮತ್ತು ಕುಂದಾಪುರದಲ್ಲಿ ಇಎಸ್‌ಐ ಚಿಕಿತ್ಸಾಲಯವಿದೆ. ಇಲ್ಲಿ ಪೂರ್ಣ ಪ್ರಮಾಣದ ಸಿಬಂದಿಯೂ ಇಲ್ಲ. ಔಷಧ ಮತ್ತು ದಾಖಲಾತಿಗಾಗಿ ಇರುವ ಕನಿಷ್ಠ ಸಿಬಂದಿಯೇ ನಿರ್ವಹಣೆ ಮಾಡುತ್ತಿದ್ದಾರೆ.

ಇಎಸ್‌ಐ ಆಸ್ಪತ್ರೆ ನಿರ್ಮಾಣ ಸಂಬಂಧ ಜಾಗ ಮತ್ತು ಅಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಿದ್ದೇವೆ.
ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.
– ಕೂರ್ಮಾ ರಾವ್‌ ಎಂ., ಜಿಲ್ಲಾಧಿಕಾರಿ, ಉಡುಪಿ

Advertisement

Udayavani is now on Telegram. Click here to join our channel and stay updated with the latest news.

Next