ದೊಡ್ಡಬಳ್ಳಾಪುರ: ಕಾರ್ಮಿಕರಿಗಾಗಿ ನಗರದ ಹೊರ ವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ದಲ್ಲಿ ನಿರ್ಮಾಣವಾಗಿರುವ 100 ಹಾಸಿಗೆಗಳ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಇನ್ನೂ ಉದ್ಘಾಟನಾ ಭಾಗ್ಯ ಕಾಣದೇ ಕಾರ್ಮಿಕರ ಪಾಲಿಗೆ ಮರೀಚಿಕೆಯಾಗಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅರೆಹಳ್ಳಿ ಗುಡ್ಡದ ಹಳ್ಳಿ ಸಮೀಪ ಸಿದ್ದರಾಮಯ್ಯ ಅವರು 2014ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಂಕು ಸ್ಥಾಪನೆಯಾಗಿದ್ದ 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆ ನಿರ್ಮಾಣ ಕಾಮಗಾರಿ ಮುಕ್ತಾಯವಾಗಿದೆ. ಸಿದ್ದ ರಾಮಯ್ಯ ಅವರು 2ನೇ ಬಾರಿಗೆ ಮುಖ್ಯಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡರು ಸಹ ಆಸ್ಪತ್ರೆಗೆ ಮಾತ್ರ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ.
ನಾಲ್ಕು ಹಂತಗಳಲ್ಲಿ ವಿಸ್ತರಣೆ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ನಾಲ್ಕು ಹಂತಗಳಲ್ಲಿ ವಿಸ್ತರಣೆಯಾಗಿದೆ. ವಿದೇಶಿ ಕಂಪನಿಗಳು ಸೇರಿದಂತೆ ಹತ್ತಾರು ಬಗೆಯ ಕೈಗಾರಿಕೆಗಳು ಇಲ್ಲಿ ಸ್ಥಾಪನೆ ಯಾಗಿದ್ದು, ಇನ್ನೂ ಹಲವಾರು ಕೈಗಾರಿಕೆ ಗಳನ್ನು ಸ್ಥಾಪಿಸಲು ಭೂಸ್ವಾಧೀನ ನಡೆಯುತ್ತಲೇ ಇದೆ. ಇಲ್ಲಿನ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ ಸೇರಿದಂತೆ ಹಲವಾರು ಬೃಹತ್ ಕೈಗಾ ರಿಕೆಗಳಲ್ಲಿ ಸುಮಾರು 80 ಸಾವಿರಕ್ಕು ಹೆಚ್ಚಿನ ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೊಸ ಕೈಗಾರಿ ಕೆಗಳಿಂದ ಸಾವಿರಾರು ಕಾರ್ಮಿಕರು ಇಲ್ಲಿ ನೆಲೆಯೂರಿ ವಂತಾಗಿದ್ದು, ಕಾರ್ಮಿಕರ ಆರೋಗ್ಯ ಕ್ಕಾಗಿ ಸೂಕ್ತ ಇಎಸ್‌ಐ ಆಸ್ಪತ್ರೆ ಇಲ್ಲವಾಗಿದೆ. ಆಸ್ಪತ್ರೆ ಇದ್ದರು ಸಹ ಕಾರ್ಮಿಕರು ದುಬಾರಿ ಹಣತೆತ್ತು ಬೆಂಗ ಳೂರಿನ ರಾಜಾಜಿನಗರದ ಇಎಸ್‌ಐ ಅಥವಾ ಖಾಸಗಿ ಆಸ್ಪತ್ರೆ ಗಳಲ್ಲಿ ಚಿಕಿತ್ಸೆ ಪಡೆಯುವಂತಹ ಸ್ಥಿತಿ ಉಂಟಾಗಿದೆ.
ಆರೋಗ್ಯ ಸೌಲಭ್ಯಗಳಿಂದ ವಂಚಿತರಾದ ಕಾರ್ಮಿಕರು: ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ದಲ್ಲಿ 10 ವರ್ಷಗಳಿಂದಲು ಸಹ ಆರೋಗ್ಯ ಸೌಲಭ್ಯ ಗಳಿಂದ ಕಾರ್ಮಿಕರು ವಂಚಿತರಾಗುತ್ತಿದ್ದಾರೆ. ಆರೋ ಗ್ಯ ಸೇವೆಗೆ ಸಿದ್ದವಾಗಿದ್ದ ಇಎಸ್‌ಐ ಆಸ್ಪತ್ರೆ ಯನ್ನಾ ದರೂ ಸೂಕ್ತ ಸಮಯದಲ್ಲಿ ಉದ್ಘಾಟನೆ ಮಾಡಿ ದ್ದರೆ ಅರ್ಥಪೂರ್ಣವಾಗುತ್ತಿತ್ತು. ಇಷ್ಟೊಂದು ದೊಡ್ಡ ಸಂಖ್ಯೆಯ ಕಾರ್ಮಿಕರು ಕೆಲಸ ಮಾಡು ತ್ತಿರುವ ಪ್ರದೇಶದಲ್ಲಿ ಸೂಕ್ತ ಆಸ್ಪತ್ರೆ ಸೌಲಭ್ಯ ಇಲ್ಲ ದಾಗಿದೆ. ರಾಜಕೀಯದ ಹಿನ್ನೆಲೆ ಏನೇ ಇದ್ದರೂ ಕಾರ್ಮಿಕರ ಆರೋಗ್ಯದ ಅನುಕೂಲಕ್ಕಾಗಿ ನಿರ್ಮಿ ಸಲಾಗಿರುವ ಇಎಸ್‌ಐ ಆಸ್ಪತ್ರೆಯನ್ನು ಶೀಘ್ರವಾಗಿ ಉದ್ಘಾಟಿಸಬೇಕು ಎನ್ನುವುದು ಕಾರ್ಮಿಕರ ಒತ್ತಾಯವಾಗಿದೆ.
ರಾಜಕೀಯ ಲಾಭ-ನಷ್ಟಕ್ಕೆ ಒಳಗಾದ ಆಸ್ಪತ್ರೆ : ಕೇಂದ್ರ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾರ್ಮಿಕ ಸಚಿವರಾಗಿದ್ದಾಗ ಇಎಸ್‌ಐ ಆಸ್ಪತ್ರೆಯ ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಂಡು, 2014ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಯಾಗಿತ್ತು. 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆ ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ನೆರವಿನಿಂದೊಂದಿಗೆ ನಿರ್ಮಾಣವಾಗಿದೆ. ಈ ಹಿಂದೆ ಸ್ಥಳೀಯವಾಗಿ ಕಾಂಗ್ರೆಸ್ ಶಾಸಕರು ಇದ್ದರು. ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಇದೆ.
ಹೀಗಾಗಿ ಕಟ್ಟಡ ನಿರ್ಮಾಣವಾಗಿದ್ದರು ಸಹ ಉದ್ಘಾಟಿಸದೆ ಮುಂದೂಡುತ್ತ ಬರಲಾಯಿತು. ಈಗ ಸ್ಥಳೀಯವಾಗಿ ಬಿಜೆಪಿ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಇದೆ. ಆಸ್ಪತ್ರೆ ಉದ್ಘಾಟನೆಯನ್ನು ಮತ್ತುಷ್ಟು ದಿನ ಮುಂದೂಡಿದರೆ ಲೋಕಸಭಾ ಚುನಾವಣೆಯ ಬಿಸಿ ಏರಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆ ಉದ್ಘಾ ಟಿಸಿ ಕಾರ್ಮಿಕರನ್ನು ಓಲೈಸಿಕೊಳ್ಳುವ ಪ್ರಯತ್ನವು ತೆರೆಮರೆಯಲ್ಲಿ ನಡೆಯುತ್ತಿರುವ ಅನುಮಾನ ಇದೆ ಎನ್ನುತ್ತಾರೆ ಕಾರ್ಮಿಕ ಮುಖಂಡ ಕೊತ್ತೂರಪ್ಪ.