Advertisement
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಎಸ್.ವಿ. ಸಂಕನೂರು ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸದ್ಯ 2 ಇಎಸ್‌ಐ ಆಸ್ಪತ್ರೆಗಳಿವೆ. ಇದೇ ರೀತಿ ಪ್ರತೀ ಜಿಲ್ಲೆಗೂ ಇಎಸ್‌ಐ ಆಸ್ಪತ್ರೆ ಇರಬೇಕು ಎಂದು ರಾಜ್ಯ ಸರಕಾರದ ನಿಲುವಾಗಿದೆ. ಆದರೆ, ಈ ಬಗ್ಗೆ ಕೇಂದ್ರ ಸರಕಾರ ತೀರ್ಮಾನ ತೆಗೆದುಕೊಳ್ಳಬೇಕು. ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ ನೀಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ರಾಜ್ಯದಲ್ಲಿ ಬೆಂಗಳೂರು ಮತ್ತು ಕಲಬುರಗಿಯಲ್ಲಿ ಇಎಸ್‌ಐ ಆಸ್ಪತ್ರೆಗಳಿವೆ. ಇದಲ್ಲದೇ 119 ಇಎಸ್‌ಐ ಚಿಕಿತ್ಸಾಲಯಗಳಿವೆ. ಕೇಂದ್ರ ಸರಕಾರ ಹೆಚ್ಚುವರಿಯಾಗಿ 19 ಚಿಕಿತ್ಸಾಲಯಗಳನ್ನು ಮಂಜೂರು ಮಾಡಿದೆ. ಎಲ್ಲ ಚಿಕಿತ್ಸಾಲಯಗಳಿಗೆ ತಲಾ 20ರಿಂದ 25 ಲಕ್ಷ ರೂ. ವೆಚ್ಚದಲ್ಲಿ ಒಂದು ರೂಪದ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. 44 ಕೋಟಿ ರೂ. ವೆಚ್ಚದಲ್ಲಿ ಯಂತ್ರೋಪಕರಣಗಳನ್ನು ಹೊಂದಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.