ಚಿಕ್ಕಬಳ್ಳಾಪುರ: ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆಮಂಜೂರು ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ದೆಹಲಿಯ ಕಾರ್ಮಿಕಸಚಿವಾಲಯದಲ್ಲಿ ನಡೆದ ಹಿರಿಯ ಅಧಿಕಾರಿಗಳಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದ್ರ ಸಿಂಗ್ ಯಾದವ್ ಅವರು, ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐಆಸ್ಪತ್ರೆ ಮಂಜೂರು ಮಾಡುವ ಪ್ರಕ್ರಿಯೆಗೆ ತಕ್ಷಣವೇಚಾಲನೆ ನೀಡುವಂತೆ ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉನ್ನತ ಮಟ್ಟದ ಸಭೆಗೂ ಮುನ್ನ ಸಚಿವ ಯಾದವ್‌ಅವರನ್ನು ಭೇಟಿ ಮಾಡಿದ್ದ ರಾಜ್ಯದ ಆರೋಗ್ಯ ಮತ್ತುವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಆಸ್ಪತ್ರೆ ಆರಂಭಿಸುವಂತೆ ಮನವಿ ಸಲ್ಲಿಸಿದರು. ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಂಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿ ಕಾರ್ಮಿಕರು ಮತ್ತು ಅವರಅವಲಂಬಿತರಿದ್ದಾರೆ. ಅವರಿಗೆ ಗುಣಮಟ್ಟದಆರೋಗ್ಯ ಸೇವೆ ದೊರಕಿಸುವ ನಿಟ್ಟಿನಲ್ಲಿ ಇಎಸ್‌ಐ ಆಸ್ಪತ್ರೆ ಅಗತ್ಯವಿದೆ. ಹೀಗಾಗಿ ತಕ್ಷಣವೇ ಆಸ್ಪತ್ರೆಗೆ ಮಂಜೂರಾತಿ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಸಚಿವ ಸುಧಾಕರ್ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಯಾದವ್ ಕೂಡಲೇ ತಮ್ಮ ಸಚಿವಾಲಯದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ಸುಧಾಕರ್, ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳಮೂಲ ಸೌಕರ್ಯ ಅಭಿವೃದ್ಧಿಗೆ ಆರೋಗ್ಯ ಮತ್ತುವೈದ್ಯಕೀಯ ಶಿಕ್ಷಣ ಸಚಿವನಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸ ಮೆಡಿಕಲ್‌ಕಾಲೇಜು ಸ್ಥಾಪನೆ, ಜಿಲ್ಲಾ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಅಭಿವೃದ್ಧಿ, ಹೊಸ ತಾಯಿ-ಮಗುವಿನ ಆಸ್ಪತ್ರೆನಿರ್ಮಾಣಕ್ಕೂ ಚಾಲನೆ ನೀಡಲಾಗಿದೆ ಎಂದರು.
ಜಿಲ್ಲೆಯು ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವುದರಿಂದ ದೊಡ್ಡ ಸಂಖ್ಯೆಯಲ್ಲಿಕಾರ್ಮಿಕರು ಪ್ರತಿನಿತ್ಯ ಸಂಚರಿಸುತ್ತಾರೆ. ಜತೆಗೆ ದೊಡ್ಡ ಸಂಖ್ಯೆಯ ಅಸಂಘಟಿತ ವಲಯದ ಕಾರ್ಮಿಕರು ಜಿಲ್ಲೆಯಲ್ಲಿ ದುಡಿಯುತ್ತಿದ್ದಾರೆ.
Related Articles
ಹಾಗೆಯೇ ಜಿಲ್ಲೆ ಮತ್ತು ತಾಲೂಕು ಕೇಂದ್ರ ದಲ್ಲಿ ಕೈಗಾರಿಕೆಗಳಿವೆ ಮತ್ತು ಹೊಸದಾಗಿ ಅನೇಕ ಕೈಗಾರಿಕೆಗಳು ತಲೆ ಎತ್ತುತ್ತಿವೆ. ಇಂತಹ ಸ್ಥಿತಿಯಲ್ಲಿ ಕಾರ್ಮಿಕರು ಮತ್ತು ಅವರನ್ನು ಅವಲಂಬಿಸಿರುವ ಕುಟುಂಬಗಳ ಸದಸ್ಯರು ಬೆಂಗಳೂರಿಗೆ ತೆರಳಿ ಇಎಸ್‌ಐ ಆಸ್ಪತ್ರೆ ಸೌಲಭ್ಯ ಪಡೆಯುವುದು ಕಷ್ಟವಾಗುತ್ತಿದೆ ಎಂದು ವಿವರಿಸಿದರು.
ಆದ್ಯತೆ ಮೇರೆಗೆ ಒಪ್ಪಿಗೆ: ಆರೋಗ್ಯ ಸಚಿವ ಸುಧಾಕರ್ ಅವರ ಮನವಿಗೆ ಸಭೆಯಲ್ಲಿಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರದ ಕಾರ್ಮಿಕಸಚಿವ ಯಾದವ್ ಅವರು, ರಾಜ್ಯದಪ್ರಸ್ತಾವನೆಯನ್ನು ಪರಿಗಣಿಸಲಾಗಿದೆ. ಆದ್ಯತೆಮೇರೆಗೆ ಅನುಮತಿ ನೀಡಲಾಗುವುದು ಎಂದು ಭರವಸೆ ನೀಡಿದರು.
ನೆರೆ ಜಿಲ್ಲೆಗಳಿಗೂ ಅನುಕೂಲ : ಚಿಕ್ಕಬಳ್ಳಾಪುರ ಜಿಲ್ಲೆಗೆ ಆಸ್ಪತ್ರೆ ಮಂಜೂರುಮಾಡುವುದರಿಂದ ನೆರೆಯ ತುಮಕೂರು,ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಕಾರ್ಮಿಕರಲ್ಲದೆ, ನೆರೆಯ ಆಂಧ್ರದ ಗಡಿ ಭಾಗದಜಿಲ್ಲೆಗಳ ಕಾರ್ಮಿಕರಿಗೂ ಸಮರ್ಪಕವೈದ್ಯಕೀಯ ಸೌಲಭ್ಯ ದೊರಕಲಿದೆ. ಪ್ರತಿಜಿಲ್ಲೆಗೂ ಇಎಸ್‌ಐ ಆಸ್ಪತ್ರೆ ಆರಂಭಿಸಬೇಕುಎಂಬುದು ರಾಜ್ಯ ಸರ್ಕಾರದ ಚಿಂತನೆ ಆಗಿದ್ದು,ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಟ್ಟು69 ಆಸ್ಪತ್ರೆಗಳ ಆರಂಭಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಪೈಕಿ 19 ಕ್ಕೆ ಮಾತ್ರ ಅನುಮತಿ ಸಿಕ್ಕಿದೆ, ಉಳಿದ ಪ್ರಸ್ತಾವನೆಗಳಿಗೂ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡುವ ಭರವಸೆ ಸಿಕ್ಕಿದೆ. ದೊಡ್ಡಸಂಖ್ಯೆಯಲ್ಲಿರುವ ಕಾರ್ಮಿಕರಿಗೆಗುಣಮಟ್ಟದ ಆರೋಗ್ಯ ಸೇವೆದೊರಕಿಸಲು ಸಾಧ್ಯವಾಗುತ್ತದೆ” -ಡಾ. ಕೆ. ಸುಧಾಕರ್, ಆರೋಗ್ಯ ಸಚಿವ