Advertisement

ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ: 40 ಸಾವಿರ ಪರೀಕ್ಷಾರ್ಥಿಗಳು

12:23 PM Mar 23, 2018 | Team Udayavani |

ಮೈಸೂರು: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟ ಹಾಗೂ ಜಿಲ್ಲೆಯ ಶೈಕ್ಷಣಿಕ ಪ್ರಗತಿಯನ್ನು ಬಿಂಬಿಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 40,516 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

Advertisement

ಪರೀಕ್ಷೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಈ ಬಾರಿ ಪರೀಕ್ಷೆಗೆ ಹಾಜರಾಗುತ್ತಿರುವ 40,516 ವಿದ್ಯಾರ್ಥಿಗಳಲ್ಲಿ 19,289 ಬಾಲಕರು ಹಾಗೂ 21,227 ಬಾಲಕಿಯರಿದ್ದಾರೆ. ಅಲ್ಲದೆ 3,278 ಪುನರಾವರ್ತಿತ ಹಾಗೂ 1090 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಯ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ 9.30ರಿಂದ 12.30ರವರೆಗೆ ಪ್ರಥಮ ಭಾಷೆಯ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯ 186 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ನಗರದಲ್ಲಿ 51 ಹಾಗೂ ಏಳು ತಾಲೂಕಿನಿಂದ 135 ಸೇರಿದಂತೆ ಒಟ್ಟು 186 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ನಗರದ ಮರಿಮಲ್ಲಪ್ಪ, ಸದ್ವಿದ್ಯಾ, ಮಹಾರಾಣಿ, ಮಹಾರಾಜ, ಮಹಾಜನ, ಜೆಎಸ್‌ಎಸ್‌, ಸೇಂಟ್‌ ಫಿಲೋಮಿನಾ, ಸಂತ ತೆರೇಸಾ ಸೇರಿದಂತೆ 51 ಪರೀಕ್ಷಾ ಕೇಂದ್ರಗಳಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯ ಆಯ್ದ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳು ನಡೆಯದಂತೆ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next