ತುಮಕೂರು: ಎಲ್ಲಾ ಕಡೆ ಹೆಚ್ಚುತ್ತಿರುವ ಕೋವಿಡ್ 19 ಮಹಾಮಾರಿಯ ಅಟ್ಟಹಾಸದ ನಡುವೆ ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷೆ ಹೇಗೆ ನಡೆಸುತ್ತಾರೆ ಎನ್ನುವ ಆತಂಕ ಇತ್ತು, ಆದರೆ ಗುರುವಾರದಿಂದ ಜಿಲ್ಲೆಯಲ್ಲಿ ಆರಂಭ ಗೊಂಡಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ 144 ಪರೀಕ್ಷಾ ಕೇಂದ್ರಗಳಲ್ಲಿಯೂ ಸುಸೂತ್ರವಾಗಿ ಆರಂಭಗೊಂಡಿದೆ. ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನಾ ಎಲ್ಲಾ ಕೊಠಡಿಗಳನ್ನು ಶುದ್ಶವಾಗಿರಿಸಿ ಅಗತ್ಯ ಸೌಲಭ್ಯ ಗಳೊಂದಿಗೆ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಿದ್ಶತೆ ಮಾಡಿತ್ತು. ಬೆಳಗ್ಗೆ 8 ಗಂಟೆಯಿಂದಲೇ ವಿದ್ಯಾರ್ಥಿಗಳು ಪರಿಕ್ಷಾ ಕೇಂದ್ರಗಳಿಗೆ ಬರುತ್ತಿದ್ದರು, ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಿಬ್ಬಂದಿ ಆರೋಗ್ಯ ತಪಾಸಣೆ ಮಾಡಿದರು.
ಪೋಷಕರು ನಿರಾಳ: ಹತ್ತನೇ ತರಗತಿ ಪರೀಕ್ಷೆ ನಡೆಯುತ್ತೋ ಇಲ್ಲವೋ ಎಂದು ಕೊಂಡಿದ್ದ ಪೋಷಕರು ಆತಂಕ ಪಡದ ರೀತಿಯಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಗುರುವಾರ ಪರೀಕ್ಷೆ ಆರಂಭ ಮಾಡಿ ಮೊದಲ ದಿನ ಸುಸೂತ್ರವಾಗಿ ಪರೀಕ್ಷೆ ನಡೆಸಿದರು.
993 ವಿದ್ಯಾರ್ಥಿಗಳು ಗೈರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 21139 ವಿದ್ಯಾರ್ಥಿಗಳು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯ 13073 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು, ಅದರಲ್ಲಿ ತುಮಕೂರು ಶೈಕ್ಷಣಿಕ ಜಿಲ್ಲೆಯ 20,733 ವಿದ್ಯಾರ್ಥಿಗಳು ಮಧುಗಿರಿ ಶೈಕ್ಷಣಿಕ ಜಿಲ್ಲೆಯ 12486 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಒಟ್ಟು ಎರಡೂ ಜಿಲ್ಲೆಯಿಂದ 33219 ವಿದ್ಯಾರ್ಥಿ ಗಳು ಪರೀಕ್ಷೆ ಬರೆದಿದ್ದು ತುಮಕೂರು ಶೈಕ್ಷ ಣಿಕ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಿಂದ 993 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ.
33219 ಪರೀಕ್ಷೆ ಬರೆದ ವಿದ್ಯಾರ್ಥಿಗಳು: ತುಮಕೂರು ದಕ್ಷಿಣ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಗುರುವಾರ ನಡೆದ ಎಸ್ ಎಸ್‌ಎಲ್‌ಸಿ ದ್ವಿತೀಯ ಭಾಷೆ ಕನ್ನಡ, ಇಂಗ್ಲಿಷ್ ವಿಷಯ ಪರೀಕ್ಷೆಗೆ ನೋಂದಣಿಯಾಗಿರುವ 34212 ವಿದ್ಯಾರ್ಥಿಗಳ ಪೈಕಿ 33219 ವಿದ್ಯಾರ್ಥಿ ಗಳು ಹಾಜರಾಗಿದ್ದು, 993 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ. ಆರ್.ಕಾಮಾಕ್ಷಿ ತಿಳಿಸಿದರು.
20,733 ವಿದ್ಯಾರ್ಥಿಗಳು ಹಾಜರು: ದ್ವಿತೀಯ ಭಾಷೆ ಕನ್ನಡ/ಇಂಗ್ಲಿಷ್ ವಿಷಯ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಣಿಯಾಗಿ ರುವ 21139 ವಿದ್ಯಾರ್ಥಿಗಳ ಪೈಕಿ 20,733 ವಿದ್ಯಾರ್ಥಿಗಳು ಹಾಜರಾಗಿದ್ದು, 406 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 7 ವಿದ್ಯಾರ್ಥಿಗಳು ನೆರೆ ರಾಜ್ಯಗಳಿಂದ, 32 ವಿದ್ಯಾರ್ಥಿಗಳು ಕಂಟೈನ್ಮೆಂಟ್ ಪ್ರದೇಶ ಗಳಿಂದ, 207 ವಲಸೆ ವಿದ್ಯಾರ್ಥಿಗಳಲ್ಲಿ 192 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 15 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ದ್ವಿತೀಯ ಭಾಷೆ ಕನ್ನಡ/ಇಂಗ್ಲೀಷ್ ವಿಷಯ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಣಿಯಾಗಿರುವ 13,073 ವಿದ್ಯಾರ್ಥಿಗಳ ಪೈಕಿ 12,486 ವಿದ್ಯಾರ್ಥಿಗಳು ಹಾಜರಾಗಿದ್ದು, 587 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 8 ವಿದ್ಯಾರ್ಥಿಗಳು ನೆರೆ ರಾಜ್ಯಗಳಿಂದ, 9 ವಿದ್ಯಾರ್ಥಿಗಳು ಕಂಟೈನ್ಮೆಂಟ್ ಪ್ರದೇಶ ಗಳಿಂದ, ಅನಾರೋಗ್ಯದಿಂದ ವಿಶೇಷ ಕೊಠಡಿ ಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 96 ವಿದ್ಯಾರ್ಥಿಗಳು ವಸತಿ ನಿಲಯದಿಂದ, 308 ವಲಸೆ ವಿದ್ಯಾರ್ಥಿಗಳಲ್ಲಿ 307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾ ಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿ ಗೈರು ಹಾಜರಾಗಿದ್ದಾರೆ ಎಂದು ತಿಳಿಸಿದರು.