Advertisement
ಮಾನ್ಯತಾ ಶುಲ್ಕ ಪಾವತಿಸದ ಶಾಲೆಗಳ ವಿದ್ಯಾರ್ಥಿಗಳ ಫಲಿತಾಂಶದ ಜತೆಗೆ ನೋಂದಣಿ ಹಾಗೂ ಹೆಸರು ತಪ್ಪಾಗಿ ಮುದ್ರಿತವಾಗಿರುವುದು ಸೇರಿ ಕೆಲವೊಂದು ತಾಂತ್ರಿಕ ದೋಷವಿದ್ದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿಲ್ಲ.ಮಾನ್ಯತಾ ಶುಲ್ಕ ಪಾವತಿಸದ ಶಾಲೆಗಳಿಗೆ ಹಲವಾರು ಬಾರಿ ನೋಟಿಸ್ ನೀಡಿದ್ದೇವೆ. ಆದರೂ, ಇದನ್ನು ಪ್ರಶ್ನಿಸಿ ಶಾಲಾ ಆಡಳಿತ ಮಂಡಳಿಗಳು ಹೈಕೋರ್ಟ್‌ಗೆ ಹೋಗಿರುವುದರಿಂದ ಪ್ರಕರಣ ಕೋರ್ಟ್‌ನಲ್ಲಿದೆ. ಹೀಗಾಗಿ ಅಂತಹ ಶಾಲೆಗಳ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಫಲಿತಾಂಶ ಬಿಡುಗಡೆ ಮಾಡುವಂತೆ ಮಂಗಳವಾರ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಳಾ ತಿಳಿಸಿದ್ದಾರೆ.