ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ಹೇಳಿದ್ದಾರೆ.
Advertisement
ವಿಕಾಸಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ನಾಲ್ಕು, ತುಮಕೂರು ಜಿಲ್ಲೆಯಲ್ಲಿ ಮೂರು, ಚಿತ್ರದುರ್ಗ, ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ ತಲಾ ಎರಡರಂತೆ 33 ಚುನಾವಣಾ ಜಿಲ್ಲೆಗಳಲ್ಲಿ ಒಟ್ಟು 38 ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿದೆ. ನಿಗದಿಯಂತೆ ಮಂಗಳವಾರ ಎಲ್ಲ ಕೇಂದ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ ಎಂದರು.
ಬಳಸಿಕೊಳ್ಳಲಾಗುತ್ತಿದೆ. ಜತೆಗೆ ರಾಜ್ಯ ಮೀಸಲು ಪಡೆ, ಸಿಎಆರ್, ಡಿಎಆರ್ 754 ತುಕಡಿಗಳು 278 ಡಿವೈಎಸ್‌ಪಿಗಳು, 947 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 5,322 ಎಎಸ್‌ಐಗಳು, 45,685 ಮುಖ್ಯಪೇದೆ-ಪೇದೆಗಳು, 26,672 ಗೃಹರಕ್ಷಕ ಸಿಬ್ಬಂದಿ ಭದ್ರತೆಯಲ್ಲಿ ತೊಡಗಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್‌ಪಂತ್ ಇದೇ ವೇಳೆ ತಿಳಿಸಿದ್ದಾರೆ.
Related Articles
ಬೆಂಗಳೂರು: ಚುನಾವಣಾ ಪೂರ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಬಂದಿದೆ.
Advertisement
ಕಾರ್ಯಾಚರಣೆ ಮುಂದುವರಿಸಬೇಕಾಗಿರುವುದರಿಂದ ನಮ್ಮ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಕೊಡಿ ಎಂದು ಆದಾಯ ತೆರಿಗೆ ಇಲಾಖೆ ಮಹಾನಿರ್ದೇಶಕ ಬಿ.ಆರ್.ಬಾಲಕೃಷ್ಣನ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಮೇ 11ರಂದು ಬಾಲಕೃಷ್ಣನ್ ಅವರು ಮುಖ್ಯ ಕಾರ್ಯದರ್ಶಿಗೆ ಈ ಪತ್ರ ಬರೆದಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜ್ಯದಲ್ಲಿ ಇನ್ನೂ ತಮ್ಮ ಕಾರ್ಯಾಚರಣೆ ಮುಂದುವರಿಸಬೇಕಿದೆ.
ಹೀಗಾಗಿ ಅವರಿಗೆ ಸೂಕ್ತ ರಕ್ಷಣೆ ಒದಗಿಸಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕನಿಗದಿಯಾಗುತ್ತಿದ್ದಂತೆ ಐಟಿ ಅಧಿಕಾರಿಗಳು ರಾಜ್ಯಾ ದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದರು. ರಾಜಕೀಯ ಮುಖಂಡರು, ಅವರ ಆಪ್ತರು ಹಾಗೂ ತೆರಿಗೆ ವಂಚಕರ ನಿವಾಸ ಮತ್ತು ಕಚೇರಿಗಳ ಮೇಲೆ ಸರಣಿ ದಾಳಿ ನಡೆಸಿ, ಕೋಟ್ಯಂತರ ರೂ. ಹಣ ಹಾಗೂ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದರು. ಈ ದಾಳಿ ವೇಳೆ ಅಘೋಷಿತ 34 ಕೋಟಿ ರೂ. ಮೌಲ್ಯದ ನಗದು ಪತ್ತೆ ಹಚ್ಚಿದ್ದರು. ಇದಕ್ಕೆ ಆಕ್ರೋಶಗೊಂಡಿರುವ ಕೆಲ ರಾಜಕೀಯ ಮುಖಂಡರು ಹಾಗೂ ಕಿಡಿಗೇಡಿಗಳು ದಾಳಿ ನಡೆಸಿದ ಐಟಿ ಅಧಿಕಾರಿಗಳ ಮೇಲೆ ಹಲ್ಲೆ ಮಾತ್ರವಲ್ಲದೆ, ಕೊಲೆಗೂ ನಿರ್ಧರಿಸಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ಬಂದಿದೆ. ಅಲ್ಲದೆ, ಈ ವಿಚಾರ ರಾಜ್ಯ ಪೊಲೀಸರ ಗಮನಕ್ಕೂ ಬಂದಿದ್ದು, ಕೆಲ ದಿನಗಳ ಹಿಂದೆ ಸರಣಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಜಿಲ್ಲೆಗಳಲ್ಲಿ ಇನ್ನೂ ಕೆಲವೆಡೆ ದಾಳಿ ನಡೆಸಬೇಕಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೆಲ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳ ಮೇಲೆ ದಾಳಿಗೆ ಐಟಿ ಸಿದಟಛಿತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಹಾಗೂ ಪೊಲೀಸರು ಐಟಿ ತನಿಖಾಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿರುವ ಐಟಿ ಅಧಿಕಾರಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಮಹಾನಿರ್ದೇಶಕ ಬಿ.ಆರ್.ಬಾಲಕೃಷ್ಣನ್ ಮನವಿ ಮಾಡಿಕೊಂಡಿದ್ದಾರೆ.