Advertisement

ಆಶಿಯಾನಾ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

12:21 PM Oct 08, 2018 | Team Udayavani |

ಬೆಂಗಳೂರು: ಅಲ್‌-ಅಮಾನ್‌ ಎಜ್ಯುಕೇಷನ್‌ ಆ್ಯಂಡ್‌ ವೆಲ್‌ಫೇರ್‌ ಟ್ರಸ್ಟ್‌ ವತಿಯಿಂದ ಕೆ.ಜಿ.ಹಳ್ಳಿ ಬಳಿಯ ಗಾಂಧಿನಗರದಲ್ಲಿ ಅಂಧರು, ವಿಕಲಚೇತನರು ಹಾಗೂ ಅನಾಥ ಮಕ್ಕಳಿಗೆ ವಸತಿ ಕಲ್ಪಿಸುವ “ಆಶಿಯಾನಾ’ ಭವನ ನಿರ್ಮಾಣಕ್ಕೆ ಭಾನುವಾರ ಶಂಕು ಸ್ಥಾಪನೆ ನೆರವೇರಿಸಲಾಯಿತು. ವಕ್ಫ್ ಹಾಗೂ ಅಲ್ಪಸಂಖ್ಯಾತರ ಸಚಿವ ಬಿ.ಜಡ್‌.ಜಮೀರ್‌ ಅಹಮ್ಮದ್‌ ಖಾನ್‌, ಸಚಿವ ಕೆ.ಜೆ.ಜಾರ್ಜ್‌, ರಾಜ್ಯಸಭಾ ಸದಸ್ಯ ಕೆ.ರೆಹಮಾನ್‌ ಖಾನ್‌ ಇತರರು ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಜಮೀರ್‌ ಅಹಮ್ಮದ್‌ ಖಾನ್‌, ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಮತ್ತೂಮ್ಮೆ ಮುಖ್ಯಮಂತ್ರಿಯಾಗಬೇಕು. ಇಡೀ ದೇಶದಲ್ಲಿ ಸಿದ್ದರಾಮಯ್ಯ ಅವರಂತಹ ನಾಯಕರು ಮತ್ತೂಬ್ಬರಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಮುಸ್ಲಿಂ ಸಮುದಾಯದವರ ಕಲ್ಯಾಣಕ್ಕಾಗಿ 3,100 ಕೋಟಿ ರೂ. ಅನುದಾನವನ್ನು ಸಿದ್ದರಾಮಯ್ಯ ನೀಡಿದ್ದಾರೆ. ಅವರು ಮತ್ತೂಮ್ಮೆ ಮುಖ್ಯಮಂತ್ರಿ ಆಗಿದ್ದಿದ್ದರೆ 10 ಸಾವಿರ ಕೋಟಿ ರೂ. ಅನುದಾನ ನೀಡುತ್ತಿದ್ದರು. ರಾಜ್ಯದ ಯಾವುದೇ ಭಾಗಕ್ಕೆ ಹೋದರೂ ಜನ ಸಿದ್ದರಾಮಯ್ಯ ಅವರ ಕೊಡುಗೆಯನ್ನು ಸ್ಮರಿಸುತ್ತಾರೆ.

ಅಲ್ಪಸಂಖ್ಯಾತರು ಸಹ ಸಿದ್ದರಾಮಯ್ಯ ಅವರ ನೆರವನ್ನು ಸ್ಮರಿಸುತ್ತಾರೆ. ರಾಜ್ಯ ಪ್ರವಾಸದ ವೇಳೆ ಸಾಕಷ್ಟು ಮುಸ್ಲಿಂ ಬಾಂಧವರು ಅವರ ಸಹಾಯವನ್ನು ಪ್ರಸ್ತಾಪಿಸುತ್ತಾರೆ ಎಂದು ತಿಳಿಸಿದರು. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸಬೇಕು. ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಆ ಭರವಸೆ ನೀಡಿದ್ದು,

ಕುಮಾರಸ್ವಾಮಿಯವರು ಐದು ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ. ಮುಂದಿನ ಅವಧಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗುತ್ತಾರೆ. ಇದು ನನ್ನೊಬ್ಬನ ಅಭಿಪ್ರಾಯವಲ್ಲ. ರಾಜ್ಯದ ಪ್ರತಿಯೊಬ್ಬ ಪ್ರಜೆಯ ಮನದಾಳದ ಆಶಯ. ದೇವರ ಆಶೀರ್ವಾದದಿಂದ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next