Advertisement
ಈ ಫುಲ್ ಫಿಲ್ಮೆಂಟ್ ಸೆಂಟರ್ ಗಳು ವಿಶೇಷ ಸೌಲಭ್ಯಗಳಾಗಿದ್ದು, ಅಲ್ಲಿ ಈ ಪ್ರದೇಶದಾದ್ಯಂತ ಮಾರಾಟಗಾರರಿಂದ ಉತ್ಪನ್ನಗಳನ್ನು ಸ್ವೀಕರಿಸಲಾಗುತ್ತದೆ, ಸಂಗ್ರಹಿಸಲಾಗುತ್ತದೆ ಮತ್ತು ಪ್ಯಾಕ್ ಮಾಡಲಾಗುತ್ತದೆ. ಈ ಪ್ರಕ್ರಿಯೆಗಳ ನಂತರ ಗ್ರಾಹಕರಿಗೆ ತಲುಪಿಸಲು ವಿಂಗಡಣೆ ಕೇಂದ್ರಗಳು ಮತ್ತು ವಿತರಣಾ ಕೇಂದ್ರಗಳಿಗೆ ರವಾನಿಸಲಾಗುತ್ತದೆ. ಕೋಲಾರ, ಹುಬ್ಬಳ್ಳಿ ಮತ್ತು ಆನೇಕಲ್ ಗಳಲ್ಲಿ ಇರುವ ಈ ಕೇಂದ್ರಗಳು ದೊಡ್ಡ ಮಟ್ಟದ ಫರ್ನಿಚರ್, ಮೊಬೈಲ್ ಗಳು, ಜವಳಿ ಉತ್ಪನ್ನಗಳು ಮತ್ತು ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ಮಾರಾಟ ಮಾಡಲು ಮಾರಾಟಗಾರರಿಗೆ ಅವಕಾಶವನ್ನು ಕಲ್ಪಿಸುತ್ತದೆ. ಈ ಮೂರೂ ಕೇಂದ್ರಗಳು ಸುಮಾರು 7 ಲಕ್ಷ ಚದರಡಿ ವಿಸ್ತೀರ್ಣವನ್ನು ಹೊಂದಿದ್ದು, 15.6 ಲಕ್ಷ ಕ್ಯೂಬಿಕ್ ಅಡಿಯಷ್ಟು ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿವೆ. 10,500ಕ್ಕೂ ಹೆಚ್ಚು ಮಾರಾಟಗಾರರಿಗೆ ನೆರವಾಗಲಿದೆ. ಈ ವಿಸ್ತರಣೆಯಿಂದ ಹೆಚ್ಚುವರಿಯಾಗಿ 14,000 ಕ್ಕೂ ಅಧಿಕ ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಒದಗಿಸಲಿದೆ ಮತ್ತು ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಿದಂತಾಗುತ್ತದೆ. ಇದಲ್ಲದೇ ಮಾರಾಟಗಾರರು ತಮ್ಮ ಉತ್ಪನ್ನಗಳನ್ನು ರಾಷ್ಟ್ರೀಯ ಮಾರುಕಟ್ಟೆಗೆ ತಲುಪಿಸುವ ಅವಕಾಶವನ್ನು ಒದಗಿಸುತ್ತದೆ.
Related Articles
Advertisement
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಫ್ಲಿಪ್ ಕಾರ್ಟ್ ರಾಜ್ಯದಲ್ಲಿ ತನ್ನ ಸರಬರಾಜು ಜಾಲ ಹೆಚ್ಚಳ ಮಾಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕವು ದೇಶದ ಸಿಲಿಕಾನ್ ಕಣಿವೆಯಾಗಿದ್ದು, ದೇಶದಲ್ಲಿ ಅತ್ಯಂತ ಯಶಸ್ವಿ ಸ್ಟಾರ್ಟಪ್ ಗಳನ್ನು ಹೊಂದಿರುವ ರಾಜ್ಯವಾಗಿದೆ. ಇದಕ್ಕೆ ಪ್ರಮುಖ ಕಾರಣ ರಾಜ್ಯದಲ್ಲಿ ಜಾರಿಯಲ್ಲಿರುವ ಸ್ನೇಹಿ ನೀತಿಗಳು, ಸೂಕ್ತ ಮೂಲಸೌಕರ್ಯಗಳು ಮತ್ತು ದೊಡ್ಡ ಪ್ರಮಾಣದಲ್ಲಿ ಪ್ರತಿಭೆಗಳ ಲಭ್ಯತೆಯಾಗಿದೆ. ಫ್ಲಿಪ್ ಕಾರ್ಟ್ ರಾಜ್ಯದಲ್ಲಿ ಗಮನಾರ್ಹವಾದ ಹೂಡಿಕೆಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಪೂರೈಕೆ ಜಾಲದ ಮೂಲಸೌಕರ್ಯ ವಿಸ್ತರಣೆಯು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ ಮತ್ತು ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯಮಶೀಲತೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡುತ್ತದೆ. ಈ ದಿಶೆಯಲ್ಲಿ ನಾವು ಫ್ಲಿಪ್ ಕಾರ್ಟ್ ಗೆ ಸಂಪೂರ್ಣ ಬೆಂಬಲದ ಭರವಸೆಯನ್ನು ನೀಡುತ್ತೇವೆ ಎಂದು ತಿಳಿಸಿದರು.
ಫ್ಲಿಪ್ ಕಾರ್ಟ್ ಗ್ರೂಪ್ ನ ಚೀಫ್ ಕಾರ್ಪೊರೇಟ್ ಅಫೇರ್ ಆಫೀಸರ್ ರಜನೀಶ್ ಕುಮಾರ್ ಮಾತನಾಡಿ, ನಮ್ಮ ಲಕ್ಷಾಂತರ ಎಂಎಸ್ಎಂಇಗಳು ಮತ್ತು ಸಣ್ಣ ಮಾರಾಟಗಾರರಿಗೆ , ಲಕ್ಷಾಂತರ ಗ್ರಾಹಕರಿಗೆ ಸೇವೆ ಸಲ್ಲಿಸಲು ನಮ್ಮ ಎಲ್ಲಾ ಪಾಲುದಾರರಿಗೆ ಮೌಲ್ಯವನ್ನು ಸೃಷ್ಟಿಸುತ್ತದೆ. ಅದು ದೇಶಾದ್ಯಂತ ಸಾವಿರಾರು ನೇರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಮತ್ತು ಸಂಬಂಧಿತ ಕೈಗಾರಿಕೆಗಳಲ್ಲಿ ಪರೋಕ್ಷವಾದ ಉದ್ಯೋಗಾವಕಾಶಗಳಿಗೆ ನೆರವಾಗುತ್ತದೆ. ಹೊಸ ಅತ್ಯಾಧುನಿಕ ಸೌಲಭ್ಯಗಳು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ನೆರವಾಗುತ್ತದೆ ಮತ್ತು ಉದ್ಯಮದಲ್ಲಿ ಒಂದು ಮೈಲಿಗಲ್ಲನ್ನು ಸ್ಥಾಪಿಸುತ್ತದೆ. ಇದರ ಮೂಲಕ ಮಾರಾಟಗಾರರು, ಎಂಎಸ್ಎಂಇಗಳು, ಸಣ್ಣ ರೈತರು ಮತ್ತು ಕುಶಲಕರ್ಮಿಗಳು ಸೇರಿದಂತೆ ಎಲ್ಲಾ ಪಾಲುದಾರರಿಗೆ ಇ-ಕಾಮರ್ಸ್ ಕಾರ್ಯಾಚರಣೆಗಳಿಗೆ ಕರ್ನಾಟಕವನ್ನು ಇನ್ನಷ್ಟು ಆಕರ್ಷಕವಾಗಿಸುತ್ತದೆ ಎಂದು ಹೇಳಿದರು.
ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕವು ಇ-ಕಾಮರ್ಸ್ ಕ್ಷೇತ್ರದಲ್ಲಿ ಬಲಯುತವಾದ ಮಾರುಕಟ್ಟೆಯ ಕೇಂದ್ರವಾಗಿ ಬೆಳೆದಿದೆ ಎಂದು ಅವರು ತಿಳಿಸಿದರು