ಜಗಳೂರು: ಹಿಂದುಳಿದ ಜಗಳೂರು ತಾಲೂಕಿನ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಜವಳಿ ಉದ್ದಿಮೆ ಸ್ಥಾಪಿಸಲು ವ್ಯಾಸಗೊಂಡಹಳ್ಳಿ ಹತ್ತಿರ ಜಮೀನನ್ನು ಗುರುತಿಸಲಾಗಿದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಸಂಸ್ಥೆಯ ಉದ್ಯೋಗಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ 500 ರೂ. ರೇಷನ್ ಕೂಪನ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನದಿ ಮೂಲಗಳಿಲ್ಲದೆ ಮಳೆಯನ್ನೇ ಆಶ್ರಯಿಸಿ ಜೀವನ ನಡೆಸುವಂತಹ ಸ್ಥಿತಿ ಇದೆ. ತಾಲೂಕಿನಲ್ಲಿ ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗಿರುವುದರಿಂದ ತಾಲೂಕಿನಲ್ಲಿ ಜವಳಿ ಉದ್ಯಮ ಮಾಡಲು ಉದ್ದೇಶಿಸಲಾಗಿದೆ ಎಂದರು.
ಮಳೆಯಾಗುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ರೈತರು ಬ್ಯಾಂಕುಗಳಲ್ಲಿ ಸಾಲ ಪಡೆಯಲು ಇಸಿ ಪತ್ರಗಳ ಅವಶ್ಯಕತೆ ಇದ್ದು, ಆನ್ ಲೈನ್‌ನಲ್ಲಿ ಈ ವ್ಯವಸ್ಥೆ ಕಲ್ಪಿಲಾಗಿದೆ. ರೈತರು ಸೇರಿದಂತೆ ಇತರರಿಗೆ ತೊಂದರೆಯಾಗದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ್ ಹುಲ್ಲುಮನೆ ತಿಮ್ಮಣ್ಣ ಮಾತನಾಡಿ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ 500 ರೂ. ರೇಷನ್ ಕೂಪನ್ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವಿನೂತನ ಪ್ರಯೋಗ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಾಪಂ ಇಒ ಮಲ್ಲ ನಾಯ್ಕ, ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್, ಡಿಸಿಸಿ ಬ್ಯಾಂಕ್ ನಾಮನಿರ್ದೇಶಿತ ಸದಸ್ಯ ಸುರಡ್ಡಿಹಳ್ಳಿ ಶರಣಪ್ಪ, ಪಪಂ ಮುಖ್ಯಾ ಧಿಕಾರಿ ರಾಜು ಡಿ. ಬಣಕಾರ, ಅನ್ನಪೂರ್ಣೇಶ್ವರಿ ಫೌಂಡೇಶನ್ ಅಧ್ಯಕ್ಷೆ ಲಕ್ಷ್ಮೀದೇವಿ, ಮಲ್ಲಿಕಾರ್ಜುನ್, ಮಂಜುನಾಥ್, ಶ್ರೀನಿವಾಸ್, ಶ್ರುತಿ, ಪ್ರವೀಣ್, ನಟರಾಜ್, ಬಸವರಾಜ್, ಇಂಜಿನಿಯರ್ ತಿಪ್ಪೇಸ್ವಾಮಿ, ಪಪಂ ಸದಸ್ಯರಾದ ನವೀನ್, ಪಾಪಲಿಂಗಪ್ಪ, ಬಿಜೆಪಿ ಮುಖಂಡರಾದ ಬಿಸ್ತುವಳ್ಳಿ ಬಾಬು, ಶಿವಕುಮಾರ್, ವಕೀಲ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.