Advertisement
ಇಂದು ಬೆಳಿಗ್ಗೆ ಸ್ವಿಸ್ ಮೂಲದ 2000 ವ್ಯಾಟ್ ಕಂಪೆನಿಯ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ರೈತರ ಆತ್ಮಹತ್ಯೆಯ ಪ್ರವೃತ್ತಿಯನ್ನು ತಡೆಯುವ ನಿಟ್ಟಿನಲ್ಲಿ ಕೃಷಿ ಆಧಾರಿತ ಆರ್ಥಿಕತೆಯನ್ನು ಸುಧಾರಿಸುವ ಯೋಜನೆಗಳ ಕುರಿತು ಆಸಕ್ತಿ ವ್ಯಕ್ತಪಡಿಸಿದರು.
Related Articles
Advertisement
ಇದಕ್ಕೂ ಮುನ್ನ ರಿನ್ಯೂ ಪವರ್ ಪ್ರತಿನಿಧಿಗಳು ರಾಜ್ಯದ ಬರಡು ಭೂಮಿಯಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಆಸಕ್ತಿ ತೋರಿದರು. ಕಂಪಪೆನಿಯ ಸಿಇಓ ಸಮಂತ್ ಸಿನ್ಹಾ ಅವರು ತಮ್ಮ ಕಂಪೆನಿಯು ರಾಜ್ಯದ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾದ ವಿದ್ಯುತ್ ಸಂಗ್ರಹಿಸುವ ಬ್ಯಾಟರಿಗಳು ಮತ್ತು ಇತರ ಉಪಕರಣಗಳನ್ನು ಅಳವಡಿಸಲು ಯೋಜಿಸಿರುವುದಾಗಿ ತಿಳಿಸಿದರು. ಆಡಳಿತಾತ್ಮಕ ಮತ್ತು ಕಾನೂನು ತೊಡಕುಗಳನ್ನು ನಿವಾರಿಸಲು ಸರ್ಕಾರ ಕ್ರಮ ವಹಿಸುವಂತೆ ಅವರು ಸಲಹೆ ಮಾಡಿದರು.
ಇಂದು ಮುಖ್ಯಮಂತ್ರಿಯವರು ಹಾಗೂ ಸರ್ಕಾರದ ಅಧಿಕಾರಿಗಳನ್ನು ಭೇಟಿ ಮಾಡಿದ ಕಂಪೆನಿಗಳ ಪ್ರತಿನಿಧಿಗಳಲ್ಲಿ ಬಹುತೇಕ ಮಂದಿ ರೈತರಿಂದ ಜಮೀನು ಖರೀದಿಸಲು ಸರ್ಕಾರದ ಕೆಲವು ಅನಪೇಕ್ಷಿತ ನಿಯಮಗಳನ್ನು ತಿದ್ದುಪಡಿ ಅಥವಾ ರದ್ದುಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಯವರು ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಹೂಡಿಕೆದಾರರ ನಿಯೋಗಗಳೊಂದಿಗೆ ಚರ್ಚಿಸುವಾಗ ಗ್ರಾಮೀಣ ಆರ್ಥಿಕತೆಯನ್ನು ಸುಧಾರಿಸುವ, ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ವಿಷಯಕ್ಕೆ ಹೆಚ್ಚಿನ ಒತ್ತು ನೀಡಿದರು. ನಮ್ಮ ರೈತರು ಮತ್ತು ಗ್ರಾಮೀಣ ಯುವಕರ ಹಿತ ರಕ್ಷಣೆ ಮಾಡುವ ಹೂಡಿಕೆದಾರರು ಹಾಗೂ ಕೈಗಾರಿಕೆಗಳಿಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದೆ ಎಂದು ಅವರು ನುಡಿದರು.
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಐಟಿ, ಬಿಟಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಸೆಲ್ವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.