ಯುವ ಜನತೆಯಲ್ಲಿ ನಾಯಕತ್ವ ರೂಪಿಸಲು “ಅನಂತ ಕುಮಾರ್ ಪ್ರತಿಷ್ಠಾನ’ ಸ್ಥಾಪಿಸಲಾಗಿದೆ. ಈ ಪ್ರತಿಷ್ಠಾನಕ್ಕೆ ನಾಯಕತ್ವ ನಿರ್ಮಾಣ ಹಾಗೂ ನೀತಿ ನಿರೂಪಣಾ ಸಂಶೋಧನಾ ಕೇಂದ್ರ ಸ್ಥಾಪಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು. ಇದಕ್ಕಾಗಿ 2020- 21ನೇ ಸಾಲಿನಲ್ಲಿ 10 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ.
ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಕ್ರೀಡಾ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವುದರೊಂದಿಗೆ ಕ್ರೀಡಾಪಟುಗಳಿಗೆ ಉತ್ತಮ ತರ ಬೇತಿ ವ್ಯವಸ್ಥೆ ಒದಗಿಸಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುವುದು. ಕ್ರೀಡೆಗೆ ಸಂಬಂಧಿಸಿದ ತರಬೇತಿ ದಾರರಿಗೆ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ಕೌಶಲ್ಯ ತರಬೇತಿಯನ್ನು ಒದಗಿಸಿ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ 5 ಕೋಟಿ ರೂ.ಅನುದಾನವನ್ನು ಸರ್ಕಾರ ಕಾಯ್ದಿರಿಸಿದೆ.
ಹಿಂದುಳಿದವರಿಗೆ “ಸರ್ವೋದಯ ಸೂತ್ರ’: ರೂಢಿಗತ ಸಂಪ್ರದಾಯದಂತೆ ಇಲಾಖಾವಾರು ಅನುದಾನ ಹಂಚಿಕೆ ಬದಲು ಈ ಬಾರಿ ವಲಯವಾರು ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ‘ಸರ್ವೋದಯ ಮತ್ತು ಕ್ಷೇಮಾಭಿ ವೃದ್ಧಿ’ ವಲಯದಡಿ ಪರಿಶಿಷ್ಟ ಜಾತಿ, ಹಿಂದು ಗಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ “ಸರ್ವೋದಯದ’ ಸೂತ್ರ ರೂಪಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‌ಸಿಪಿ- ಟಿಎಸ್‌ಪಿ ಯೋಜನೆಯಡಿ 26,930 ಕೋಟಿ ರೂ. ಅನುದಾನ ನಿಗದಿ. ಇದು ನಿಯ ಮಾನುಸಾರ ಹಂಚಿಕೆ ಮಾಡಬೇಕಾದ ಮೊತ್ತಕ್ಕಿಂತ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆ ಗಳಿಗಾಗಿ ನೀಡುವ ಷೇರು ಬಂಡವಾಳ 10 ಲಕ್ಷ ಇದ್ದದ್ದನ್ನು ದ್ವಿಗುಣಗೊಳಿಸಿ, 20 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.
ಎಸ್ಸಿ, ಎಸ್ಟಿ ವರ್ಗದ ನಿರುದ್ಯೋಗಿ ಯುವಕ- ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮೂಲಕ ವಾಹನ ಚಾಲನಾ ತರಬೇತಿ, ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸುಗಳೊಂದಿಗೆ ಕೌಶಲ್ಯಾ ಭಿವೃದ್ಧಿ ತರಬೇತಿ ಹಾಗೂ ಸಣ್ಣ ಸರಕು ಸಾಗಾಣಿಕೆ ವಾಹನ ಖರೀದಿಗೆ ಸಾಲದ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂ.ಅನುದಾನ ಮೀಸಲಿಡಲಾಗಿದೆ.