Advertisement

Arya:ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ:ನಾರಾಯಣ ಗುರು ಭವನ ನಿರ್ಮಾಣ-ಸಿದ್ದರಾಮಯ್ಯ ಘೋಷಣೆ

10:54 PM Aug 31, 2023 | Team Udayavani |

ಬೆಂಗಳೂರು: ಈಗಾಗಲೇ ಘೋಷಣೆಯಾಗಿರುವ ಈಡಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು ಮತ್ತು ನಾರಾಯಣ ಗುರು ಭವನ ನಿರ್ಮಿಸಲು ಸರಕಾರದಿಂದ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಲಾಗುವುದು. ನಾರಾಯಣಗುರು ಭವನ ನಿರ್ಮಿಸಲು ಸರಕಾರ ಸಹಾಯ ಮಾಡಲಿದೆ ಎಂದು ಭರವಸೆ ನೀಡಿದರು.

ಬೆಂಗಳೂರಿನ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಬಿಡಿಎಯಿಂದ ಮಂಜೂರಾಗಿರುವ 108 ಚ.ಮೀ. ನಿವೇಶನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಡಲಾಗಿದೆ. ಇದಕ್ಕೆ ಆರ್ಥಿಕ ಸಹಾಯ ನೀಡಲಾಗುವುದು ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮೊದಲಾದವರು ಮಾತನಾಡಿದರು.
ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಎಚ್‌.ಆರ್‌.ಗವಿಯಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷ ಡಾ| ಎಂ.ತಿಮ್ಮೇಗೌಡ, ಬೆಂಗಳೂರು ಬಿಲ್ಲವ ಅಸೋಸಿಯೇಶನ್‌ ಅಧ್ಯಕ್ಷ ಎಂ.ವೇದ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಸರಕಾರಕ್ಕೆ ಸಲ್ಲಿಸಿರುವ
ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘವು 9 ಪ್ರಮುಖ ಬೇಡಿಕೆ ಈಡೇರಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮಕ್ಕೆ 500 ಕೋ. ರೂ. ಅನುದಾನ ಕಾದಿರಿಸುವುದು.
ಸಮುದಾಯ ಭವನ ನಿರ್ಮಾಣಕ್ಕೆ 500 ಕೋಟಿ ರೂ. ಅನುದಾನ.
ಈಡಿಗ, ಬಿಲ್ಲವ, ನಾಮಧಾರಿ ಸೇರಿ 26 ಒಳಪಂಗಡಗಳ ಕುಲಶಾಸ್ತ್ರ ಅಧ್ಯಯನವನ್ನು ಶೀಘ್ರದಲ್ಲಿ ಪೂರ್ಣಗೊಳಿಸುವುದು.
26 ಪಂಗಡದ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ತರಬೇತಿ ಕೇಂದ್ರ, ನಾರಾಯಣಗುರು ಮಠ, ಗ್ರಂಥಾಲಯ, ಸಂಶೋಧನ ಕೇಂದ್ರ ಸ್ಥಾಪನೆ.
ಮಲಯಾಳಂ ಹಾಗೂ ಸಂಸ್ಕೃತದಲ್ಲಿರುವ ಗುರುಗಳ ವಾš¾ಯವನ್ನು ಕನ್ನಡಕ್ಕೆ ಭಾಷಾಂತರಿಸಲು ಕ್ರಮ.
ಬೆಂಗಳೂರಿನ ಪ್ರಮುಖ ವೃತ್ತದಲ್ಲಿ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ಕ್ರಮ.
ಬನ್ನೇರುಘಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಂಕ್ಷನ್‌ ಬಳಿ ಬರುವ ಮೆಟ್ರೋ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರು ಸೂಚಿಸುವುದು.
ದಸರಾ ಮಹೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ
ಎಸ್‌ಎನ್‌ಡಿಪಿ ಯೋಗಂ ಬೆಂಗಳೂರು ಯೂನಿಯನ್‌ಗೆ ಕಮ್ಮನಹಳ್ಳಿಯಲ್ಲಿ ಸರಕಾರ ನೀಡಿರುವ ಶಾಲೆಯ ಅಬಿವೃದ್ಧಿಗಾಗಿ 5 ಕೋ.ರೂ. ರೂ. ಅನುದಾನ.

Advertisement
Advertisement

Udayavani is now on Telegram. Click here to join our channel and stay updated with the latest news.

Next