Advertisement

ದಿವ್ಯಾಂಗರಿಗೆ ಸೌಲಭ್ಯ ಕಲ್ಪಿಸಲು ಕೇಂದ್ರ ಸ್ಥಾಪನೆ

11:48 AM Mar 14, 2021 | Team Udayavani |

ಚಾಮರಾಜನಗರ: ಜಿಲ್ಲೆಯ ದಿವ್ಯಾಂಗರಿಗೆ ಒಂದೇಡಿ ಸೌಲಭ್ಯ ಒದಗಿಸುವ ಸಲುವಾಗಿ 45 ಲಕ್ಷ ರೂ. ವೆಚ್ಚದಲ್ಲಿ ವಿಕಲಚೇತನರ ಸಬಲೀಕರಣ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಇದುಉತ್ತಮ ಬೆಳವಣಿಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದರು.

Advertisement

ನಗರದ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಎದುರಾಗುವ ಸಮಸ್ಯೆ, ಸವಾಲುಗಳನ್ನುಅತ್ಯಂತ ಆತ್ಮವಿಶ್ವಾಸದಿಂದ ಮೆಟ್ಟಿನಿಲ್ಲುವದಿವ್ಯಾಂ ಗರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.

ದಿವ್ಯಾಂಗರ ಸಬಲೀಕರಣಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಹತ್ತು-ಹಲವು ಸವಲತ್ತುಕಲ್ಪಿ ಸಿವೆ. ಶ್ರವಣದೋಷ, ದೃಷ್ಟಿದೋಷ ಸೇರಿದಂತೆ ದೇಹದ ಯಾವುದೇ ಅಂಗವೈಕಲ್ಯವನ್ನುದೋಷವೆಂದು ಪರಿಗಣಿಸದೇ ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು ಎಂದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ,ಜಿಲ್ಲಾ ಕೇಂದ್ರ ಹಾಗೂ ತಾಲೂಕುಗಳಲ್ಲಿ ದಿವ್ಯಾಂಗರಿಗೆ ಸಮುದಾಯ ಭವನಗಳ ಅಗತ್ಯವಿದೆ. ಭವನ ನಿರ್ಮಾಣಕ್ಕೆ ಸರ್ಕಾರದ ಅನುದಾನದಜೊತೆಗೆ ಶಾಸಕರ ನಿಧಿಯ ಅನುದಾನ ಬಳಸಿಕೊಳ್ಳಲು ಅವಕಾಶವಿದ್ದು, ತಾವು ಸಹ ಭವನದನಿರ್ಮಾ ಣಕ್ಕೆ ಭೂಮಿ ದೊರೆತರೆ ನೆರವು ನೀಡುವುದಾಗಿ ತಿಳಿಸಿದರು.

ಇದೇ ವೇಳೆ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ಉಚಿತ ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚುಅಂಕಪಡೆದ ದಿವ್ಯಾಂಗ ಮಕ್ಕಳನ್ನು ಸನ್ಮಾನಿಸಲಾಯಿತು. ಈ ವೇಳೆ ಜಿಪಂ ಅಧ್ಯಕ್ಷೆ ಎಂ. ಅಶ್ವಿ‌ನಿ,ಶಾಸಕ ಆರ್‌. ನರೇಂದ್ರ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ, ಚುಡಾಶಾಂತ ಮೂರ್ತಿ ಕುಲಗಾಣ, ನಗರಸಭೆ ಅಧ್ಯಕ್ಷೆಆಶಾ, ಜಿಪಂ ಉಪಾಧ್ಯಕ್ಷ ಶಶಿಕಲಾ, ಸದಸ್ಯರಾದಆರ್‌. ಬಾಲರಾಜು, ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾ ಯಿನಿದೇವಿ, ಹೆಚ್ಚುವರಿ ಎಸ್ಪಿ ಅನಿತಾಹದ್ದಣ್ಣನವರ್‌, ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ ಉಪನಿರ್ದೆಶಕ ಬಸವರಾಜು,ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್‌ ಇತರರಿದ್ದರು.

Advertisement

ಇದಕ್ಕೂ ಮೊದಲು ಸಚಿವರು ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಒರೆಕಲ್‌ ಸಂಸ್ಥೆಯಿಂದ ಆಶಾಕಾರ್ಯಕತೆಯರಿಗೆ ಆರೋಗ್ಯ ಪರಿಕರ ಕಿಟ್‌ ವಿತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next