Advertisement

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಿ ದ್ವಾರ ಸ್ಥಾಪನೆ

11:01 AM Jun 17, 2022 | Team Udayavani |

ಕಾಪು: ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ  ಮಾರಿಯಮ್ಮ ಗುಡಿ ಮತ್ತು ಉಚ್ಚಂಗಿ ದೇವಿಯ ಗುಡಿಗಳ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ಕಾರ್ಯಕ್ರಮಗಳು ಶುಕ್ರವಾರ ಸಂಪನ್ನಗೊಂಡಿತು.

Advertisement

ಕ್ಷೇತ್ರದ ಪ್ರಧಾನ ತಂತ್ರಿ ವಿದ್ವಾನ್ ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ವಿಧಿ ವಿಧಾನಗಳು ಸಂಪನ್ನಗೊಂಡವು.

ಇದನ್ನೂ ಓದಿ:ಬಂದಿದೆ ನೋಡಿ ಹೊಸ ಮೊಬೈಲ್ ಸ್ಯಾಮ್ ‍ಸಂಗ್ ಗೆಲಾಕ್ಸಿ ಎಂ 53; ಹಿಡಿಯಲು ಹಗುರ, ಜೇಬಿಗೆ ಭಾರ!

ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ,  ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ರಾಜಶೇಖರ ಕೋಟ್ಯಾನ್, ಅನಿಲ್ ಬಲ್ಲಾಳ್ ಬೀಡು, ಮುಂಬಯಿ‌ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಉಪಾಧ್ಯಕ್ಷ ಉದ್ಯಮಿ ಕೃಷ್ಣ ವೈ. ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ, ಮಾರಿಯಮ್ಮ ದರ್ಶನ ಪಾತ್ರಿ ಗುರುಮೂರ್ತಿ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಮಾಧವ ಆರ್. ಪಾಲನ್,  ಮನೋಹರ್ ಎಸ್. ಶೆಟ್ಟಿ , ಗಂಗಾಧರ ಸುವರ್ಣ, ಕಟ್ಟಡ ಸಮಿತಿಯ ಅಧ್ಯಕ್ಷ ಪುರುಷೋತ್ತಮ್‌ ಶೆಟ್ಟಿ, ಗ್ರಾಮ ಪ್ರಚಾರ ಸಮಿತಿ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯ, ಲೀಲಾಧರ ಶೆಟ್ಟಿ, ಭದ್ರತಾ ವಿಭಾಗದ ಪ್ರಧಾನ ಸಂಚಾಲಕ ಡಾ. ಪ್ರಶಾಂತ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಮತ್ತು ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ‌ ಕಾಪು ಸಾವಿರ‌ ಸೀಮೆಯ ಭಗವದ್ಭಕ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next