Advertisement

Eshwar Khandre ಕಲ್ಯಾಣದಲ್ಲಿ ಬೃಹತ್‌ ಕೈಗಾರಿಕಾ ಕಾರಿಡಾರ್‌ ಸ್ಥಾಪನೆ

01:11 AM Jul 30, 2024 | Team Udayavani |

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ, ದೇಶ-ವಿದೇಶಗಳಲ್ಲಿರುವ ಸಂಪದ್ಭರಿತ ಮಾನವ ಸಂಪನ್ಮೂಲವನ್ನು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಅದರ ಸಾಮರ್ಥ್ಯ ಬಳಸಿಕೊಳ್ಳಲು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬೃಹತ್‌ ಕೈಗಾರಿಕಾ ಕಾರಿಡಾರ್‌ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

Advertisement

ನಗರದಲ್ಲಿ ಸೋಮವಾರ ನಡೆದ ಶರಣಬಸವ ವಿಶ್ವವಿದ್ಯಾಲಯದ 7ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರ 59ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಭಾಗದಲ್ಲಿ ಮಾನವ ಸಂಪನ್ಮೂಲ ಸಮೃದ್ಧವಾಗಿದೆ ಹಾಗೂ ಅದಕ್ಕೆ ಅವಕಾಶಗಳ ಕೊರತೆಯಿಂದ ಹಿಂದುಳಿಯುವಂತಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಮತ್ತು ತಾಂತ್ರಿಕ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಪ್ರತಿಭೆ ಬಹಿರಂಗಪಡಿಸಲು ಉತ್ತಮ ಅವಕಾಶಗಳ ಹುಡುಕಾಟದಲ್ಲಿ ದೇಶ-ವಿದೇಶದ ಇತರ ನಗರಗಳಿಗೆ ಸ್ಥಳಾಂತರಗೊಂಡಿದ್ದಾರೆ. ಈ ದೇಶ ವಿದೇಶಗಳಲ್ಲಿ ನಮ್ಮ ಮಾನವ ಸಂಪನ್ಮೂಲ ಸ್ಥಳಾಂತರಗೊಳ್ಳುವ ಪ್ರಕ್ರಿಯೆ ತಡೆಗಟ್ಟುವ ತುರ್ತು ಅವಶ್ಯಕತೆಯಿದೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಕೈಗಾರಿಕಾ ವಲಯದಲ್ಲಿ ಹೂಡಿಕೆ ಉತ್ತೇಜಿಸಲು ಈ ಪ್ರದೇಶದ ಮಾನವ ಸಂಪನ್ಮೂಲಗಳಿಗೆ ಉದ್ಯೋಗದ ಮಾರ್ಗ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next