ಬೆಂಗಳೂರು: ರಾಜ್ಯ ನೇಕಾರ ಅಭಿವೃದ್ಧಿ ನಿಗಮ ರಚನೆ ಸಂಬಂಧ ಅಧಿಕೃತ ಆದೇಶ ಹೊರಡಿಸಿದ ಅಂಗವಾಗಿ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎಸ್. ಸೋಮಶೇಖರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
Advertisement
ರಾಜ್ಯದಲ್ಲಿ ಒಟ್ಟು 60 ಲಕ್ಷ ಜನಸಂಖ್ಯೆ ಹೊಂದಿರುವ ನೇಕಾರ ಸಮುದಾಯವು ರಾಜ್ಯದ ಎಲ್ಲಾ ಭಾಗಗಳಲ್ಲಿ ವಾಸವಾಗಿದ್ದಾರೆ. ನಮ್ಮ ಸಮುದಾಯದ ಬಹುದಿನಗಳ ಬೇಡಿಕೆ ಈಡೇರಿಸಿರುವುದು ಸಂತಸ ತಂದಿದೆ. ಈ ನೂತನ ನಿಗಮದಿಂದ ನಮ್ಮ ಸಮಾಜದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ದಾರಿ ಮಾಡಿಕೊಟ್ಟಂತಾಗಿದೆ, ಎಲ್ಲಾ ಒಳಪಂಗಡಗಳ ಬೆಳವಣಿಗೆಯಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.