Advertisement
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಪೌಷ್ಟಿಕ ಪುನರ್ವಸತಿ ಕೇಂದ್ರ ಆರಂಭಗೊಂಡಿದ್ದು ತಾಲೂಕಿನಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಿ ಗುಣ ಮಟ್ಟದ ಆಹಾರ ಪದಾರ್ಥಗಳನ್ನು ನೀಡುವ ಮೂಲಕ ಮಕ್ಕಳ ಬೆಳವಣಿಗೆ ಮತ್ತು ಪ್ರಾಥಮಿಕ ಹಂತದ ಶಿಕ್ಷಣಕ್ಕೆ ಈ ಕೇಂದ್ರ ಪೂರಕವಾಗಿದೆ.
Related Articles
Advertisement
ಉತ್ತಮ ಪ್ರತಿಕ್ರಿಯೆ: ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್‌ಕುಮಾರ್ ಸರ್ಕಾರ ಎನ್‌ಆರ್‌ಸಿ ಯೋಜನೆಯಲ್ಲಿ ಅಪೌಷ್ಟಿಕತೆಉಂಟಾಗಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಮಕ್ಕಳ ಆರೋಗ್ಯವನ್ನು ಉತ್ತಮ ಪಡಿಸುವ ಯೋಜನೆ ಇದಾಗಿದೆ. ಈಗಾಗಲೇ ಬೇಲೂರು, ಅರಸಿಕೇರೆ, ಹಾಸನ ಆಸ್ಪತ್ರೆಗಳಲ್ಲಿ ಕೇಂದ್ರಗಳನ್ನು ಸ್ಥಾಪಿಸಿದ್ದು ಸಾರ್ವಜನಿಕರಲ್ಲಿ ಉತ್ತಮ ಪ್ರತಿಕ್ರಿಯೆ ಉಂಟಾಗಿದೆ ಎಂದು ತಿಳಿಸಿದರು.
ಕೇಂದ್ರಕ್ಕೆ ದಾಖಲಾದ ಮಗುವಿನ ದೈಹಿಕ ಮಾನಸಿಕ, ಅರ್ಥಿಕ ಮತ್ತು ಪೋಷಕಾಂಶದ ಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸುವುದು, ಗಂಭೀರ ಸ್ಥಿತಿಯಿಂದ ಕೇಂದ್ರಕ್ಕೆ ಬರುವ ಮಕ್ಕಳಿ ಗೆ ತುರ್ತು ಆರೋಗ್ಯ ಸೇವೆಯನ್ನು ನೀಡುವುದು, ಮಗುವಿನ ವೈದ್ಯಕೀಯ ಮತ್ತು ಪೋಷಕಾಂಶ ಯುಕ್ತ ಆಹಾರ ಸೇವೆಯನ್ನು ಒದಗಿಸುವುದು, ಮಗು ಮತ್ತು ತಾಯಿಗೆ ಸುರಕ್ಷಿತ ವಾತಾವರಣ ಒದಗಿಸುವುದು, ಮಗುವಿನ ಬಿಡುಗಡೆ ಸಮಯದಲ್ಲಿ ತಾಯಿಗೆ ಪೋಷಕಾಂಶ ಯುಕ್ತ ಆಹಾರ ಕುರಿತು ಮಾಹಿತಿ ನೀಡುವ ಯೋಜನೆ ಇದಾಗಿದೆ ಎಂದು ಹೇಳಿದರು.
4 ಲಕ್ಷ ರೂ. ವೆಚ್ಚ: ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ನರಸೇಗೌಡ ಮಾತನಾಡಿ, ಸರ್ಕಾರ ಸುಮಾರು 4 ಲಕ್ಷ ವೆಚ್ಚದಲ್ಲಿ ಪೌಷ್ಟಿಕ ಆಹಾರ ಚೇತನ ಕೇಂದ್ರ ಸ್ಥಾಪನೆ ಮಾಡಿದ್ದು, ಈಗಗಲೆ 6 ಮಕ್ಕಳಿಗೆ ಚಿಕಿತ್ಸೆ ನೀಡಿ 3 ಮಕ್ಕಳನ್ನು ಮನೆಗೆ ಕಳುಹಿಸಿದ್ದು, ಮಕ್ಕಳಿಗೆ ಚಿಕಿತ್ಸೆ ನೀಡುವ ಜೊತೆಯಲ್ಲಿ ವಿವಿಧ ಬಗೆಯ ಆಟಿಕೆ ಮತು ಟೀವಿ ವೀಕ್ಷಣೆಗೆ ಅನುಕೂಲಮಾಡಿಕೊಡಲಾಗಿದೆ ಎಂದು ವಿವರಿಸಿದರು.ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್ ಇದ್ದರು.