Advertisement

ಅಪಾರ್ಟ್‌ಮೆಂಟ್‌ಗಳಿಗೆ ಪ್ರತ್ಯೇಕ ಮತಗಟ್ಟೆ ಸ್ಥಾಪನೆ

07:00 AM Apr 07, 2018 | Team Udayavani |

ಬೆಂಗಳೂರು: ದೊಡ್ಡ ಹೌಸಿಂಗ್‌ ಸೊಸೈಟಿಗಳಲ್ಲಿ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸುವಂತೆ ಕೆಲವು ರಾಜಕೀಯ ಪಕ್ಷಗಳು ಮನವಿ ಮಾಡಿದ್ದು, ಈ ಬಗ್ಗೆ ಪರಿಶೀಲಿಸಿದ ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆಂದು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌ ತಿಳಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 400ಕ್ಕೂ ಹೆಚ್ಚು ಫ್ಲ್ಯಾಟ್‌ ಅಥವಾ ವಸತಿ ಸಂಕೀರ್ಣಗಳು ಇರುವ ಪ್ರದೇಶಗಳಲ್ಲಿ ಅಲ್ಲಿನ ನಿವಾಸಿಗಳಿಗೆ ಮತದಾನದ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪ್ರತ್ಯೇಕ ಮತಗಟ್ಟೆ ಸ್ಥಾಪಿಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ. ಇದನ್ನು ಆಯೋಗ ಸಕಾರಾತ್ಮಕವಾಗಿ ಸ್ವೀಕರಿಸಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಗರ ಪ್ರದೇಶಗಳಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಯಾಗಾಗಲೂ ಕಡಿಮೆ ಆಗಿರುತ್ತದೆ. ಹೊರವಲಯದ ಅಪಾರ್ಟ್‌ಮೆಂಟ್‌, ಫ್ಲ್ಯಾಟ್‌ಗಳಲ್ಲಿ ವಾಸ ಮಾಡುವವರು ದೂರದ ಮತಗಟ್ಟೆಗೆ ಬರುವುದಿಲ್ಲ. ಅಂತಹ ಮತದಾರರಿಗೆ ಅನುಕೂಲ ಮಾಡಿಕೊಟ್ಟು, ಆ ಮೂಲಕ ನಗರದ ಶೇಕಡವಾರು ಮತದಾನ ಪ್ರಮಾಣ ಹೆಚ್ಚಿಸಬಹುದು ಎಂದು ಹೇಳಿದ್ದಕ್ಕೆ “ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಳ್ಳಬೇಕಾದ ಎಲ್ಲ ಕ್ರಮಗಳ ಬಗ್ಗೆ ಆಯೋಗ ಮುಕ್ತವಾಗಿದೆ’ ಎಂದರು. 

ಮತದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಮತದಾನದ ದಿನ ರಾಜ್ಯದ ಎಲ್ಲ ದೊಡ್ಡ ಶಾಪಿಂಗ್‌ ಮಾಲ್‌ಗ‌ಳು, ಮನರಂಜನಾ ಕೇಂದ್ರಗಳನ್ನು ಬಂದ್‌ ಮಾಡಿಸಬೇಕು ಎಂದು ಕೆಲವು ರಾಜಕೀಯ ಪಕ್ಷಗಳು ಸಲಹೆ ನೀಡಿವೆ. ಈ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next