Advertisement

ವಿಶೇಷ ಕೃಷಿ ಉತ್ಪನ್ನ ವಲಯ ಸ್ಥಾಪನೆ

07:00 AM Dec 11, 2017 | Team Udayavani |

ಬೆಂಗಳೂರು: ರಾಜ್ಯದ ರೈತರು ಉತ್ಪಾದಿಸುವ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಮತ್ತು ಬೆಲೆ ಒದಗಿಸುವ
ಉದ್ದೇಶದಿಂದ ವಿಶೇಷ ಕೃಷಿ ಉತ್ಪನ್ನ ವಲಯಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದ್ದು, ಸೋಮವಾರದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

Advertisement

ರಾಜ್ಯದ ವಿವಿಧ ಭಾಗಗಳಲ್ಲಿ ಕೃಷಿ ಮಾರುಕಟ್ಟೆಗಳು ಇರುವ ಹಾಗೆ ರೈತರ ಅನುಕೂಲಕ್ಕಾಗಿ ಕೃಷಿ ಉತ್ಪನ್ನ ವಲಯ ಗಳನ್ನು ಸ್ಥಾಪಿಸಿ ಆ ಮೂಲಕ ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವುದರ ಜತೆಗೆ ಕೃಷಿ ಬಗ್ಗೆ ರೈತರಿಗೆ ಮಾಹಿತಿ ನೀಡುವುದು ಈ ಕೃಷಿ ಉತ್ಪನ್ನ ವಲಯದ ವಿಶೇಷ. ಇದರ ಜತೆಗೆ, ವಿವಿಧ 29 ಇಲಾಖೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒಂದೇ ಸೂರಿನಡಿ ಸಾರ್ವಜನಿಕರಿಗೆ ಕಲ್ಪಿಸುವ ಸೇವಾ ಸಿಂಧು ಯೋಜನೆ, ನಗರ ಪ್ರದೇಶಗಳಲ್ಲಿ ಶುದ್ಧ ನೀರಿನ ಮೂಲಗಳ ಸಂರಕ್ಷಣೆ, ಅದನ್ನು ಕಲುಷಿತಗೊಳಿಸುವ ತ್ಯಾಜ್ಯ ನೀರಿನ ಮರುಬಳಕೆ ಕುರಿತಂತೆ ವಿಶೇಷ ಕಾರ್ಯನೀತಿಗೆ ಅನುಮೋದನೆ, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು 10 ಅಶ್ವಶಕ್ತಿವರೆಗಿನ ಪಂಪ್‌ಸೆಟ್‌ ಗಳ ವಿದ್ಯುತ್‌ ಸ್ಥಾವರಗಳಿಗೆ ಉಚಿತ ವಿದ್ಯುತ್‌ ಸರಬರಾಜಿಗಾಗಿ 2018-19ನೇ ಸಾಲಿನ ಆಯವ್ಯಯದಲ್ಲಿ ಸಹಾಯಧನ ಒದಗಿಸುವುದು, ಕನ್ನಡ ಚಲನಚಿತ್ರ ಅಮೃತೋತ್ಸವ ಭವನ ನಿರ್ಮಾಣ ಕಾಮಗಾರಿಯ 22.84 ಕೋಟಿ ರೂ.ಮೊತ್ತದ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡುವ ವಿಚಾರಗಳು ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿವೆ. ಇದಲ್ಲದೆ, ಬಹುದಿನಗಳ ಬೇಡಿಕೆ ಯಾ ಗಿ ರುವ ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸುವ ಕುರಿತಾದ ವಿಷಯ ಕೂಡ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಈ ಕುರಿತಂತೆ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. 

ಕರಾವಳಿಗೆ ಪಶ್ಚಿಮ ವಾಹಿನಿ: ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮಾಭಿಮುಖವಾಗಿ ಹರಿಯುತ್ತಿರುವ ನದಿಗಳ ನೀರನ್ನು ಕಿಂಡಿ ಅಣೆಕಟ್ಟೆಗಳ ಮೂಲಕ ಸಂಗ್ರಹಿಸಲು 2017-18ನೇ ಸಾಲಿನ ಬಜೆಟ್‌ ನಲ್ಲಿ ಘೋಷಿಸಿದ್ದ ಪಶ್ಚಿಮ ವಾಹಿನಿ ಯೋಜನೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಸೋಮವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ
ಕೈಗೊಳ್ಳುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next