Advertisement

ಸೀಮಾ ನಿರ್ಣಯ ಆಯೋಗ ರಚನೆ: ನಿರ್ಧಾರ ಸಮರ್ಥಿಸಿಕೊಂಡ ಸರ್ಕಾರ

10:38 PM Mar 05, 2022 | Team Udayavani |

ಬೆಂಗಳೂರು: ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳ ಗಡಿಗಳನ್ನು ಗುರುತಿಸಿ, ಮೀಸಲಾತಿ ನಿಗದಿಪಡಿಸಲು ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚನೆ ಮಾಡಿರುವುದರಿಂದ ರಾಜ್ಯ ಚುನಾವಣಾ ಆಯೋಗದ ಸ್ವಾತಂತ್ರ್ಯ ಮತ್ತು ಕಾರ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

Advertisement

ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್‌ ರಾಜ್‌ ಮತ್ತು ಗ್ರಾಮ ಸ್ವರಾಜ್‌ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಲಿಖಿತ ಹೇಳಿಕೆ ಸಲ್ಲಿಸಿದೆ.

ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಸಂವಿಧಾನದ ಪರಿಚ್ಛೇದ 243-ಕೆ ಅಡಿಯಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ವಹಿಸಿಕೊಡಲಾದ ಜವಾಬ್ದಾರಿ ಅಲ್ಲ. ರಾಜ್ಯ ಚುನಾವಣಾ ಆಯೋಗದ ಮೇಲಿನ ಭಾರ ಕಡಿಮೆ ಮಾಡಲು ಹಾಗೂ ತಾ.ಪಂ, ಜಿ.ಪಂ ಕ್ಷೇತ್ರಗಳ ಗಡಿ ಗುರುತಿಸುವ, ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕವಾಗಿ ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮೂಲಕ ನಡೆಸಲು ಪ್ರತ್ಯೇಕ ಆಯೋಗ ರಚಿಸಲಾಗಿದೆ. ಹಾಗಾಗಿ, ಸೀಮಾ ನಿರ್ಣಯ ಆಯೋಗದ ರಚನೆ ಪ್ರಶ್ನಿಸುವ ಮಾನ್ಯತೆ ಚುನಾವಣಾ ಆಯೋಗಕ್ಕೆ ಇಲ್ಲ ಎಂದು ಸರಕಾರ ಹೇಳಿದೆ. ಸರಕಾರದ ಲಿಖೀತ ಹೇಳಿಕೆಯನ್ನು ದಾಖಲಿಸಿಕೊಂಡ ಹೈಕೋರ್ಟ್‌ ವಿಚಾರಣೆಯನ್ನು ಏಪ್ರಿಲ್‌ 12ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next