Advertisement

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ

12:35 AM Jun 21, 2019 | Sriram |

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದ ಏಳಿಗೆಗಾಗಿ ಪ್ರತ್ಯೇಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸಮಾಜದ ಮುಖಂಡರು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಮನವಿ ಮಾಡಿದ್ದಾರೆ.

Advertisement

ಗುರುವಾರ ಅಖೀಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾದ ಗೃಹ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಆರೋಗ್ಯ ಸಚಿವ ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಎಸ್‌.ಆರ್‌. ಪಾಟೀಲ್, ಬಸವರಾಜ ರಾಯರೆಡ್ಡಿ, ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಸೇರಿದಂತೆ ಸಮುದಾಯದ ಮುಖಂಡರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯ ಮೇಲ್ವರ್ಗದ 3ಬಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದರೂ, ಈ ಸಮಾಜದಲ್ಲಿ ಅತ್ಯಂತ ಬಡವರು, ಕೃಷಿ ಕುಟುಂಬಗಳು, ಭೂ ರಹಿತರು, ಶೇ.51 ಕ್ಕಿಂತಲೂ ಅನಕ್ಷರಸ್ಥ ಕುಟುಂಬಗಳಿವೆ. ಅಂತಹ ಜನರಿಗೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಮೇಲೆ ಬರಲು ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಅಖೀಲಭಾರತ ವೀರಶೈವ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಈಶ್ವರ್‌ ಖಂಡ್ರೆ ಮನವಿ ಮಾಡಿದರು.

ಮನವಿಗೆ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಬಗೆ ಹರಿಸಲು ಪ್ರಯತ್ನಿಸಲಾಗುವುದು. ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿಮ್ಮ ಧ್ವನಿಗೆ ನನ್ನ ಧ್ವನಿ ಸೇರಿಸುವುದಾಗಿ ತಿಳಿಸಿದರು. ಡಿಸಿಎಂ ಡಾ.ಜಿ.ಪರಮೇಶ್ವರ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next