Advertisement
ನಗರದ ತಾಲೂಕು ಪಂಚಾಯಿತಿ ಬಳಿಯ ದೇವನಹಳ್ಳಿ ಶಿಬಿರ ಕಚೇರಿ ಆವರಣದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ನಡೆದ 2ನೇ ಹಂತದ ದೇವನಹಳ್ಳಿ ಶಿಬಿರ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
Related Articles
Advertisement
ಹೈನುಗಾರಿಕೆ ರೈತರ ಜೀವನಾಡಿ: ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ನಿಸರ್ಗ ಎಲ್.ಎನ್.ನಾರಾಯಣಸ್ವಾಮಿ, ಹೈನುಗಾರಿಕೆ ರೈತಾಪಿ ವರ್ಗದ ಜೀವನಾಡಿಯಾಗಿದೆ. ತಾಲೂಕಿನಲ್ಲಿ ರೇಷ್ಮೆ ಮತ್ತು ಹೈನುಗಾರಿಕೆ ಎರಡು ಕಣ್ಣುಗಳಿದ್ದಂತೆ. ಬಮುಲ್ ಉಪಾಧ್ಯಕ್ಷ ಶ್ರೀನಿವಾಸ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ಸಹಕಾರ ಸಂಘಗಳು ಉತ್ತಮವಾಗಿ ಜನರಿಗೆ ಅನುಕೂಲ ಕಲ್ಪಿಸುತ್ತಿವೆ. ಪ್ರತಿ ಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದಿಂದ ಗ್ರಾಮೀಣ ಜನರಿಗೆ ಅನುಕೂಲ ಮಾಡುತ್ತಿದ್ದಾರೆ. ಸಹಕಾರ ಸಂಘದ ತತ್ವದಡಿ ಸಂಘ ಬೆಳವಣಿಗೆಯಾಗುತ್ತಿದೆ ಎಂದರು.
ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಜಿಪಂ ಉಪಾಧ್ಯಕ್ಷೆ ಅನಂತಕುಮಾರಿ ಮಾತನಾಡಿ, ಬಮುಲ್ ರೈತರಿಗೆ ಹೆಚ್ಚಿನ ಅನುಕೂಲ ಮಾಡುತ್ತಿದ್ದು, ಇದರ ಸದುಪಯೋಗ ಮಾಡಿಕೊಳ್ಳಬೇಕೆಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಂಗಳೂರು ಹಾಲು ಒಕ್ಕೂಟದ ಉಪಾಧ್ಯಕ್ಷ ಶ್ರೀನಿವಾಸ್, ಶಿಬಿರ ಕಚೇರಿಯ 2ನೇ ಹಂತದ ಕಟ್ಟಡವನ್ನು 1 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಪಶು ವೈದ್ಯಕೀಯ ಲ್ಯಾಬ್‌ಗ ಬೆಂಗಳೂರಿಗೆ ಹೋಗಬೇಕಾಗಿತ್ತು. ಇಲ್ಲಿಯೇ ಪ್ರಾರಂಭವಾಗಿರುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಈ ವೇಳೆ ತಾಪಂ ಅಧ್ಯಕ್ಷೆ ಭಾರತಿ, ಜಿಪಂ ಸದಸ್ಯರಾದ ಕೆ.ಸಿ.ಮಂಜುನಾಥ್, ರಾಧಮ್ಮ, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರಾದ ತಿಮ್ಮರಾಜು, ಬಿಡಿ ನಾಗಪ್ಪ, ರಾಜ್ ಕುಮಾರ್, ಕೃಷ್ಣಯ್ಯ, ಹಾಪ್‌ಕಾಮ್ಸ್ ಉಪಾಧ್ಯಕ್ಷ ಮುನೇಗೌಡ, ನಿರ್ದೇಶಕ ಶ್ರೀನಿವಾಸ್, ಎಪಿಎಂಸಿ ಅಧ್ಯಕ್ಷ ಮಂಜುನಾಥ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಜಿಲ್ಲಾ ಸಹಕಾರ ಒಕ್ಕುಟದ ಅಧ್ಯಕ್ಷ ಎ.ಸಿ.ನಾಗರಾಜ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಮಾಜಿ ಅಧ್ಯಕ್ಷ ಆರ್.ಮುನೇಗೌಡ, ಮುನಿರಾಜು, ತಾಲೂಕು ಸೊಸೈಟಿ ಅಧ್ಯಕ್ಷ ಶ್ರೀರಾಮಯ್ಯ, ತಾಪಂ ಸದಸ್ಯ ರಾದ ಕಾರಹಳ್ಳಿ ಶ್ರೀನಿವಾಸ್, ಭೀಮ್ ರಾಜ್, ಮಹೇಶ್, ಚೈತ್ರಾ, ಶಶಿಕಲಾ, ಮಾಜಿ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರಾದ ಸೋಮಣ್ಣ, ಎನ್ ನಾರಾಯಣಸ್ವಾಮಿ , ದೇವನಹಳ್ಳಿ ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಡಾ.ಗಂಗಯ್ಯ ಇದ್ದರು.