Advertisement
ಪಾಲೋಳಿಯಲ್ಲಿ ಸರ್ವಋತು ಸೇತುವೆ ನಿರ್ಮಾಣವಾಗ ಬೇಕೆಂಬುದು 30 ವರ್ಷಗಳ ಬೇಡಿಕೆ. ಸ್ಥಳೀಯರು ಸೇರಿಕೊಂಡು ಸಂಘಟನಾತ್ಮಕವಾಗಿ ಹೋರಾಟ ರೂಪಿಸುವ ಸಲುವಾಗಿ ನಿವೃತ್ತ ಶಿಕ್ಷಕ ಸಾಂತಪ್ಪ ಗೌಡ ಪಿಜಕಳ ಅವರ ಅಧ್ಯಕ್ಷತೆಯಲ್ಲಿ ಪಾಲೋಳಿ ಕುಮಾರಧಾರಾ ಶಾಶ್ವತ ಸೇತುವೆ ಹೋರಾಟ ಸಮಿತಿ ರಚಿಸಿ, ಹೋರಾಟ ಆರಂಭಿಸಿದ್ದರು. ಕಡಬದ ರಾಜಕೀಯ ಮುಂದಾಳು, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಅವರು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ, ಪಾಲೋಳಿ ಸೇತುವೆ ನಿರ್ಮಾಣದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟ ಪರಿಣಾಮ ಗ್ರಾಮಸ್ಥರ ಹೋರಾಟಕ್ಕೆ ಸರಕಾರದ ಮಟ್ಟದಲ್ಲಿ ಪ್ರಥಮ ಸ್ಪಂದನೆ ಲಭಿಸಿದೆ.
ಕೆಲವು ವರ್ಷಗಳಿಂದ ಊರವರೇ ಸೇರಿಕೊಂಡು ಶ್ರಮದಾನದ ಮೂಲಕ ಇಲ್ಲಿ ತಾತ್ಕಾಲಿಕ ನೆಲೆಯ ಸೇತುವೆ ನಿರ್ಮಾಣ ಮಾಡುತ್ತಿದ್ದಾರೆ. 4 ವರ್ಷಗಳ ಹಿಂದೆ ದಾನಿಗಳ ಆರ್ಥಿಕ ನೆರವಿನಿಂದ ಎಡಮಂಗಲ ಹಾಗೂ ಪಿಜಕಳ ಪರಿಸರದ ಜನರ ಶ್ರಮದಾನದ ಫಲವಾಗಿ 120 ಮೀ. ಉದ್ದ, 10 ಮೀ. ಆಗಲದ ಸೇತುವೆ ನಿರ್ಮಿಸಲಾಗಿತ್ತು. ಆದರೆ ಮಳೆಗಾಲದಲ್ಲಿ ನೀರಿನ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋಗುವ ಸೇತುವೆಯನ್ನು ಪ್ರತೀ ಬೇಸಗೆಯಲ್ಲಿ ಊರವರು ಪುನರ್ ನಿರ್ಮಾಣ ಮಾಡಿ ಉಪಯೋಗಿಸುತ್ತಿದ್ದಾರೆ. ಈ ಬಾರಿ ಮತ್ತೆ ಶ್ರಮದಾನದ ಮೂಲಕ ಹಾನಿಯಾಗಿರುವ ತಾತ್ಕಾಲಿಕ ಸೇತುವೆಯ ದುರಸ್ತಿಗೆ ಸಿದ್ಧತೆಗಳು ನಡೆಯುತ್ತಿವೆ.
Related Articles
ಪಾಲೋಳಿ ಮತ್ತು ಎಡಮಂಗಲ ಪೇಟೆಯ ನಡುವೆ ಇರುವುದು ಕೇವಲ 2 ಕಿ.ಮೀ. ಗಳ ಅಂತರ. ಆದರೆ ಕುಮಾರಧಾರಾ ನದಿ ಹರಿಯುತ್ತಿರುವುದರಿಂದ ಪಾಲೋಳಿ – ಪಿಜಕ್ಕಳದ ಜನರು ಎಡಮಂಗಲವನ್ನು ತಲುಪಬೇಕಾದರೆ ಕಡಬ- ಕೋಡಿಂಬಾಳ-ಪುಳಿಕುಕ್ಕು ಮೂಲಕ 15 ಕಿ.ಮೀ.ಗಳಷ್ಟು ದೂರ ಸುತ್ತುಬಳಸಿ ಪ್ರಯಾಣಿಸಬೇಕಿದೆ. ಸಮರ್ಪಕ ಬಸ್ ಸೌಕರ್ಯ ಇಲ್ಲದ ಕಾರಣ ಸುಲಭದ ದಾರಿಯಲ್ಲ. ಪಾಲೋಳಿಯಲ್ಲಿ ಸೇತುವೆ ನಿರ್ಮಾಣವಾದರೆ ಕಡಬದಿಂದ ಕೇವಲ 5 ಕಿ.ಮೀ. ಸಂಚರಿಸಿ ಎಡಮಂಗಲ ತಲುಪಬಹುದು.
Advertisement
ಹೆಚ್ಚು ಅನುಕೂಲನೂತನವಾಗಿ ಆಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕಿನ ವ್ಯಾಪ್ತಿಗೆ ಎಡಮಂಗಲ, ಎಣ್ಮೂರು, ದೋಳ್ಪಾಡಿ, ಚಾರ್ವಾಕ ಹಾಗೂ ಕಾಣಿಯೂರು ಗ್ರಾಮಗಳು ಸೇರ್ಪಡೆಯಾಗಿದ್ದು, ತಾಲೂಕು ಕೇಂದ್ರ ಕಡಬವನ್ನು ತಲುಪಲು ಪಾಲೋಳಿ ಮಾರ್ಗ ಹತ್ತಿರದ ದಾರಿಯಾಗಿದೆ. ಇಲ್ಲಿ ಕುಮಾರಧಾರೆಗೆ ಶಾಶ್ವತ ಸೇತುವೆ ನಿರ್ಮಾಣವಾಗಬೇಕು. ಶಾಶ್ವತ ಸೇತುವೆ ನಿರ್ಮಾಣವಾದರೆ ಎರಡೂ ಬದಿಯ ಜನರಿಗೆ ಅನುಕೂಲವಾಗಲಿದೆ.
– ಚಂದ್ರಶೇಖರ ಮರಕ್ಕಡ,
ಎಡಮಂಗಲ ಅಂದಾಜುಪಟ್ಟಿ ಸಲ್ಲಿಕೆ
ಪಾಲೋಳಿ ಸೇತುವೆ ನಿರ್ಮಾಣಕ್ಕೆ ಅಂದಾಜುಪಟ್ಟಿ ತಯಾ ರಿಸಿ ಸರಕಾರಕ್ಕೆ ಕಳುಹಿಸಲಾಗಿದೆ. ಹಣಕಾಸು ಇಲಾಖೆಯಿಂದ ಅನುಮೋದನೆಯಾದ ಬಳಿಕ ಸರಕಾರದಿಂದ ಆಡಳಿತಾತ್ಮಕ ಅನುಮೋದನೆ ಸಿಕ್ಕಿ ಬಜೆಟ್‌ನಲ್ಲಿ ಅನುದಾನ ಇರಿಸಿದ ಮೇಲೆ ಟೆಂಡರ್ ಪ್ರಕ್ರಿಯೆ ನಡೆಯಬೇಕು. ಈ ಎಲ್ಲ ಪ್ರಕ್ರಿಯೆಗಳಿಗೆ ಸಾಕಷ್ಟು ಸಮಯಾವಕಾಶ ಅಗತ್ಯ.
-ಪ್ರಮೋದ್‌ಕುಮಾರ್ ಕೆ.ಕೆ.
ಪಿಡಬ್ಲ್ಯೂಡಿ ಎಇ, ಪುತ್ತೂರು ನಾಗರಾಜ್ ಎನ್.ಕೆ.