Advertisement
ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ರಫೇಲ್ ಡಸಾಲ್ಟ್ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎರಿಕ್ ಟ್ರ್ಯಾಪಿಯರ್ ಅವರು ಮೊದಲ ರಫೇಲ್ ಯುದ್ಧ ವಿಮಾನವನ್ನು ಅಧಿಕೃತವಾಗಿ ಹಸ್ತಾಂತರಿಸಿದರು.
ಬಳಿಕ ರಾಜನಾಥ್ ಸಿಂಗ್ ಅವರು ರಫೇಲ್ ಯುದ್ಧ ವಿಮಾನವನ್ನು ಏರಿ ಅದರಲ್ಲಿ ಹಾರಾಟ ನಡೆಸಿದರು. ಪೈಲಟ್ ಫಿಲಿಪ್ ಡ್ಯುಶಾಟ್ ಅವರು ರಕ್ಷಣಾ ಸಚಿವರಿದ್ದ ಈ ರಫೇಲ್ ಅನ್ನು ಚಲಾಯಿಸಿದರು. ಈ ಮೂಲಕ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಥಮ ರಕ್ಷಣಾ ಸಚಿವರೆಂಬ ಹೆಗ್ಗಳಿಕೆಗೆ ರಾಜನಾಥ್ ಸಿಂಗ್ ಅವರು ಪಾತ್ರರಾದರು.
Related Articles
Advertisement