Advertisement

SIT: ನೈತಿಕ ಪೊಲೀಸ್‌ಗಿರಿ, ಅತ್ಯಾಚಾರ: ಎಸ್‌ಐಟಿ ತನಿಖೆಗೆ ಬೊಮ್ಮಾಯಿ ಆಗ್ರಹ

11:29 PM Jan 13, 2024 | Team Udayavani |

ಬೆಂಗಳೂರು: ಹಾವೇರಿ ಯಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕೆಂದು ಆಗ್ರಹಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಡಾ| ಜಿ.ಪರಮೇಶ್ವರ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾಕರ ವಿಚಾರದಲ್ಲಿ ಹುಸಿ ಕಾಳಜಿ ತೋರಿಸುವ ಕಾಂಗ್ರೆಸ್‌ ಸರಕಾರ ಕರಾವಳಿ ಭಾಗದಲ್ಲಿ ನಡೆಯುವ ನೈತಿಕ ಪೊಲೀಸ್‌ಗಿರಿ ತಡೆಯುವುದಕ್ಕೆ ಮಾತ್ರ ವಿಶೇಷ ಘಟಕ ಸ್ಥಾಪಿಸಿದೆ. ಆದರೆ ಹಾವೇರಿ ಪ್ರಕರಣದಲ್ಲಿ ಒಂದು ಶಬ್ದವನ್ನೂ ಮಾತನಾಡಿಲ್ಲ. ಇಂಥ ಪ್ರಕರಣದಲ್ಲಿ ಹೇಗೆ ನಡೆದುಕೊಳ್ಳಬೇಕೆಂದು ಪೊಲೀಸರಿಗೆ ಆದೇಶ ನೀಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ. ಹಾಗಾ ದರೆ ಸಮುದಾಯ ನೋಡಿ ಪ್ರಕರಣ ದಾಖಲಿಸುವುದು ನಿಮ್ಮ ಸರಕಾರದ ಮಾನದಂಡವೇ ಎಂದು ಪ್ರಶ್ನಿಸಿದ್ದಾರೆ.

ಕಾನೂನು ಹೋರಾಟ
ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸದಿದ್ದರೆ ನಾವು ಕಾನೂನು ಹೋರಾಟ ನಡೆಸಬೇಕಾಗುತ್ತದೆ. ಯಾವುದೇ ಸಮುದಾಯದ ಮಹಿಳೆಯ ಮೇಲೆ ಅತ್ಯಾಚಾರವಾದರೂ ಅದು ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ. ಈ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ತನಿಖೆ ನಡೆಸಬೇಕು. ರಾಜ್ಯದಲ್ಲಿ ಇನ್ನು ಮುಂದೆ ಇಂಥ ಪ್ರಕರಣ ನಡೆದರೆ ಎಸ್‌ಐಟಿ ತನಿಖೆ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿದರು.

ಮಹಿಳೆಯರ ರಕ್ಷಣೆಗೆ ಅಗತ್ಯ ಕ್ರಮ: ಪರಮೇಶ್ವರ್‌

ರಾಜ್ಯದಲ್ಲಿ ಮಹಿಳಾ ಸುರಕ್ಷೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಸರಕಾರದ ಮೇಲೆ ಅನಾವಶ್ಯಕವಾಗಿ ಸುಳ್ಳು ಆರೋಪಗಳನ್ನು ಹೊರಿಸುವುದು ಸರಿಯಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

Advertisement

ಶನಿವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ಭಯಾ ಯೋಜನೆಯಡಿ ಮಹಿಳಾ ಸುರûಾ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಹಾವೇರಿ ಘಟನೆಗೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿ¨ªಾರೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್‌ಎಲ್‌) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಈ ಮೊದಲೇ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದರು.

ಮಹಿಳೆಯರಿಗೆ ರಕ್ಷಣೆ ಇಲ್ಲ: ಮಹಿಳಾ ಮೋರ್ಚಾ
ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ತಂಡ ರವಿವಾರ ಹಾವೇರಿಗೆ ಭೇಟಿ ನೀಡಿ ಸಾಮೂಹಿಕ ಅತ್ಯಾಚಾರ ಸಂತ್ರಸ್ತಳಿಗೆ ಸಾಂತ್ವನ ಹೇಳಲಿದೆ.
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಮಂಜುಳಾ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ಪ್ರಕಟಿಸಿದ್ದು, ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗಲೇ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ನಡೆದಿತ್ತು. ಆ ಪ್ರಕರಣದ ಆರೋಪಿಗಳು ಸಚಿವ ಸತೀಶ್‌ ಜಾರಕಿಹೊಳಿ ಚೇಲಾಗಳು ಎಂಬ ಕಾರಣಕ್ಕೆ ಅವರನ್ನು ಬಂಧಿಸಿಲ್ಲ. ಆ ಪ್ರಕರಣದ ಬಗ್ಗೆಯೂ ನಾವು ಹೋರಾಟ ನಡೆಸುತ್ತೇವೆ. ಕಾಂಗ್ರೆಸ್‌ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವಾಗಿದೆ ಎಂದು ಆರೋಪಿಸಿದರು.

ಮಹಿಳಾ ದೌರ್ಜನ್ಯ: ಆರ್‌. ಅಶೋಕ್‌ ಕಿಡಿ
ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣ ಗಳ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ಎಂ ಸಿದ್ದರಾಮಯ್ಯನವರಿಗೆ ಕರಸೇವಕರ ಮೇಲಿನ 32 ವರ್ಷಗಳ ಹಳೆ ಪ್ರಕರಣಕ್ಕೆ ಮರುಜೀವ ನೀಡಿ ರಾಜಕೀಯ ಮಾಡುವುದರಲ್ಲಿ ತೋರುವ ಕಳಕಳಿ, ಆಸಕ್ತಿ ಮಹಿಳೆಯರ ಅತ್ಯಾಚಾರ, ಕಿಡ್ನಾಪ್‌, ಹಲ್ಲೆ ಪ್ರಕರಣಗಳ ಅಪರಾಧಿಗಳನ್ನು ಹಿಡಿಯುವುದರಲ್ಲಿ ಇದ್ದಿದ್ದರೆ ರಾಜ್ಯದ ಮಹಿಳೆಯರಿಗೆ ಇಂದು ಈ ರೀತಿ ದುಃಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next