Advertisement

ನೀತಿಸಂಹಿತೆ ಉಲ್ಲಂಘನೆ: ಬಿಜೆಪಿಯಿಂದ ದೂರು

08:37 AM Oct 13, 2018 | |

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಲ್ಲಿದ್ದರೂ ಮಂಡ್ಯ ಪಟ್ಟಣದಲ್ಲಿ ಕುಟುಂಬವೊಂದಕ್ಕೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಮೂರು ಲಕ್ಷ ರೂ. ನೆರವು ನೀಡುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿಯು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಅ.9ರಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಮಂಡ್ಯ ಪಟ್ಟಣದಲ್ಲಿ ಮುಸ್ಲಿಂ ಕುಟುಂಬದ ಹೆಣ್ಣು ಮಗಳಿಗೆ ಮೂರು ಲಕ್ಷ ರೂ. ನಗದು ನೀಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತಾಪಿಸಿ ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ. ಎಂದು ಬಿಜೆಪಿ ಸಹ ವಕ್ತಾರ ಅನ್ವರ್‌ ಮಾಣಿಪ್ಪಾಡಿ ದೂರಿನಲ್ಲಿ ತಿಳಿಸಿದ್ದಾರೆ. 

Advertisement

ಜತೆಗೆ ಸಚಿವರು ಅದೇ ಕುಟುಂಬದ ಹೀನಾ ಕುಸೂರ್‌ ಎಂಬ ಯುವತಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದಿಟಛಿ ನಿಗಮದಲ್ಲಿ ಕೆಲಸ ಕೊಡಿಸಿದ್ದು, ಇದು ಕೂಡ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಒಂದು ವರ್ಗದ ಮತದಾರರನ್ನು ಸೆಳೆಯುವ ತಂತ್ರವನ್ನು ಬಿಜೆಪಿ ತೀವ್ರವಾಗಿ ಖಂಡಿಸಲಿದ್ದು, ಕೂಡಲೇ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next