Advertisement

ಬಿಎಸ್‌ವೈ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಆರೋಪ

12:30 PM Mar 15, 2017 | Team Udayavani |

ಮೈಸೂರು: ನಂಜನಗೂಡು ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಾರ್ಯಕರ್ತರೊಬ್ಬರಿಗೆ ಹಣ ನೀಡುವ ಮೂಲಕ ನೀತಿ ಸಂಹಿತೆ ಉಲ್ಲಂ ಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕ್ಷೇತ್ರ ವ್ಯಾಪ್ತಿಯ ಹುಲ್ಲಹಳ್ಳಿಯಲ್ಲಿ ಪ್ರಚಾರ ಸಭೆ ಮುಗಿಸಿ ಹೊರಡಲು ಕಾರನ್ನೇರಿದ ಯಡಿಯೂರಪ್ಪ ಅವರನ್ನು ಕಾರ್ಯಕರ್ತನೊಬ್ಬ ಹಣಕ್ಕಾಗಿ ಕೈಚಾಚಿದಾಗ ಕಾರಿನ ಗಾಜು ಇಳಿಸಿ ಹಣ ನೀಡಿದ್ದಾರೆ ಎನ್ನಲಾಗಿದೆ.

Advertisement

ಸಾಕ್ಷ್ಯ ಇಲ್ಲ: ಎಲ್ಲ ಚುನಾವಣಾ ಪ್ರಚಾರ ಸಭೆಗಳ ವೀಡಿಯೋ ಚಿತ್ರೀಕರಣ ಮಾಡಿಸಲಾಗುತ್ತಿದೆ. ಆದರೆ, ಯಡಿಯೂರಪ್ಪ ಹಣ ನೀಡಿದ ಬಗ್ಗೆ ನಮ್ಮ ಬಳಿ ಯಾವುದೇ ಸಾಕ್ಷ್ಯಧಾರವಿಲ್ಲ. ಹಣ ನೀಡುತ್ತಿರುವ ಬಗ್ಗೆ ವೀಡಿಯೋ ಅಥವಾ ಛಾಯಾಚಿತ್ರ ಕೊಟ್ಟರೆ ದೂರು ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿರುವ ಚುನಾವಣಾಧಿಕಾರಿ ಜಿ.ಜಗದೀಶ್‌, ಇನ್ನು ನಂಜನಗೂಡಿನ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಸಿ.ಎಂ.ಇಬ್ರಾಹಿಂ ಅವರು ಪ್ರಧಾನಿ ಹಾಗೂ ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ತಮ್ಮ ಗಮನಕ್ಕೆ ಬಂದಿಲ್ಲ ಎಂದರು.

ನೀತಿ ಸಂಹಿತೆ ಉಲ್ಲಂಘನೆ: ನೋಟಿಸ್‌: ನಂಜನಗೂಡು ಉಪಚುನಾವಣೆಯ ಪ್ರಚಾರ ಸಭೆಗಳಿಗೆ ಅನುಮತಿ ಪಡೆಯದೆ ವಾಹನ ಬಳಸಿದ ಸಂಬಂಧ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಚುನಾವಣಾಧಿಕಾರಿ ನೋಟಿಸ್‌ ಜಾರಿ ಮಾಡಿದ್ದಾರೆ.

ಮಾ.12ರಂದು ನಂಜನಗೂಡಿನಲ್ಲಿ ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರ ಸಭೆಗೆ ಹಾಗೂ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಾ.12, 13ರಂದು ನಂಜನಗೂಡು ಕ್ಷೇತ್ರದಲ್ಲಿ ನಡೆಸಿದ ಚುನಾವಣಾ ಪ್ರಚಾರ ಸಭೆಗಳ ಸಂಬಂಧ ಬಳಸಲಾದ ವಾಹನಗಳಿಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್‌ ಜಾರಿ ಮಾಡಲಾಗಿದ್ದು, 24 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next