Advertisement
“ಸ್ವರ್ಣ ಗೌರಿ’ ಮನೆಗೆ ಬರುತ್ತಾಳೆ ಎಂದರೆ ಎಲ್ಲ ಬಗೆಯ ಸಮೃದ್ಧಿ ಮನೆಯಲ್ಲಿ ನೆಲೆಯಾಗಲಿದೆ ಎಂದೇ ಅರ್ಥ. ಈ ಬಾರಿಯ ಗೌರಿ ಹಬ್ಬ ಅಂತಹ ಜಲ ಸಮೃದ್ಧಿಯನ್ನು ತರುತ್ತಿದೆ. ಈ ಭಗೀರಥ ಕಾರ್ಯವನ್ನು ಮಾಡುವ ಅವಕಾಶ ಕಾಂಗ್ರೆಸ್ ಸರಕಾರಕ್ಕೆ, ಅದು ಕೂಡ ನನಗೆ ದೊರಕಿರುವುದು ಪುಣ್ಯವೆಂದೇ ಭಾವಿಸಿದ್ದೇನೆ. ಒಂದು ಕಡೆ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜಧಾನಿ ಬೆಂಗಳೂರು. ಇದರ ಸುತ್ತಮುತ್ತ ನೀರಾವರಿಗೂ ಕಷ್ಟ ಪಡುವ ಜಿಲ್ಲೆಗಳು.
Related Articles
Advertisement
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದೊಳಗೆ ಯೋಜನೆಯ ಮೊದಲ ಹಂತದ ನೀರು ಸರಬರಾಜು ಕಾರ್ಯ ಸಾಕಾರಗೊಂಡಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮಾತ್ರವಲ್ಲದೆ, ರಾಮನಗರದ ಕೆಲವು ಭಾಗ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೂ ಜೀವಜಲ ದೊರೆಯಲಿದೆ.
ನೀರಾವರಿ ಯೋಜನೆ ಪ್ರಗತಿ: 2027ಕ್ಕೆ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸು ವುದು ಕಾಂಗ್ರೆಸ್ ಸರಕಾರದ ಆದ್ಯತೆಯ ಮಹತ್ವ ಕಾಂಕ್ಷೆ. ಪ್ರಣಾಳಿಕೆಯಲ್ಲಿದ್ದ “ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ’ ಎಂಬ ಘೋಷಣೆಯಂತೆಯೇ ಈಗ ಎತ್ತಿನಹೊಳೆಯ ನೀರಿನ ಮೂಲಕ ನೀರಾವರಿಯ ಪ್ರಗತಿ ತರಲಾಗುತ್ತಿದೆ.
ಯೋಜನೆಯಡಿ ಒಟ್ಟು 24.01 ಟಿಎಂಸಿ ನೀರನ್ನು ಕುಡಿಯುವ ನೀರು ಹಾಗೂ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಲಾಗುತ್ತದೆ. ಇದರಿಂದ ಬರ ಪೀಡಿತವಾದ 29 ತಾಲೂಕುಗಳ 6,657 ಗ್ರಾಮಗಳ 75.59 ಲಕ್ಷ ಜನರ ದಾಹ ತೀರಲಿದೆ. ಜತೆಗೆ 5 ಜಿಲ್ಲೆಗಳ 527 ಕೆರೆಗಳ ಅಂತರ್ಜಲ ಮರುಪೂರಣ ಕಾರ್ಯವೂ ನಡೆಯಲಿದೆ. ಇದಕ್ಕಾಗಿ ರಾಜ್ಯ ಸರಕಾರ
ಖರ್ಚು ಮಾಡುತ್ತಿರುವುದು ಬರೋಬ್ಬರಿ 23,251 ಕೋಟಿ ರೂ.!ಬಿಜೆಪಿ ಸರಕಾರ ರಾಜಕೀಯ ಲಾಭದ ದೃಷ್ಟಿಯಿಂದ ದೂರದೃಷ್ಟಿಯಿಲ್ಲದೇ ಯೋಜನೆ ರೂಪಿಸಿತ್ತು. ಆದರೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ, ಯೋಜನೆಯ ಮೊತ್ತವನ್ನು ಹೆಚ್ಚಿಸಿ, 2014ರ ಫೆಬ್ರವರಿಯಲ್ಲಿ ಅನುಮೋದನೆ ನೀಡಿತು. ಅನಂತರ ಚಿಕ್ಕಬಳ್ಳಾಪುರದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಕಾಮಗಾರಿಗೆ ವೇಗ ನೀಡಿ ನೀರೆತ್ತುವ ಕಾರ್ಯವನ್ನು ನನಸು ಮಾಡಿದೆ. ಇದು ಬಯಲುಸೀಮೆಯ ನೀರಾವರಿ ಕ್ರಾಂತಿ ಯಲ್ಲಿ ಆರಂಭದ ಹೆಜ್ಜೆ. ಈ ಹೆಜ್ಜೆಯನ್ನು ಇನ್ನಷ್ಟು ಮುಂದಕ್ಕೆ ಒಯ್ದು, ಎತ್ತಿನಹೊಳೆ ಯೋಜನೆಯನ್ನು ಈ ಸರಕಾರದ ಅವಧಿಯಲ್ಲೇ ಪೂರ್ಣ ಗೊಳಿಸುವುದು ನಮ್ಮ ಮುಂದಿನ ಗುರಿ ಮತ್ತು ಸವಾಲು. ಅದಕ್ಕಾಗಿ ಜನಬಲವೊಂದಿದ್ದರೆ ಸಾಕು. ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ