Advertisement

D.K Shivakumar: 100 ದಿನಗಳಲ್ಲಿ ಎತ್ತಿನಹೊಳೆ ನೀರು

09:57 PM Aug 22, 2023 | Team Udayavani |

ಸಕಲೇಶಪುರ: ಮುಂದಿನ 100 ದಿನಗಳಲ್ಲಿ 42 ಕಿ.ಮೀ.ವರೆಗಿನ ಎತ್ತಿನಹೊಳೆ ಮೊದಲ ಹಂತದ ಯೋಜನೆಯಲ್ಲಿ ನೀರು ಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ಮಂಗಳವಾರ ಹಾಸನ ಜಿಲ್ಲೆಯ ಸಕಲೇಶಪುರದ ಹೆಬ್ಬನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ 400 ಕೆ.ವಿ. ಸಬ್‌ಸ್ಟೇಷನ್‌ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಅನಂತರ ಅಧಿಕಾರಿಗಳ ಸಭೆ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಶ್ಚಿಮ ಘಟ್ಟದಲ್ಲಿ ಹರಿಯುವ ನೀರಿನಲ್ಲಿ 24 ಟಿಎಂಸಿ ನೀರನ್ನು ಕೋಲಾರದವರೆಗೆ ತೆಗೆದುಕೊಂಡು ಹೋಗಲು ಯೋಜನೆ ತಯಾರು ಮಾಡಿದ್ದೇವೆ. 24 ಸಾವಿರ ಕೋಟಿ ರೂ.ಗಳ ಯೋಜನೆ ಇದು. ಈಗಾಗಲೇ 14 ಸಾವಿರ ಕೋಟಿ ರೂ. ಖರ್ಚಾಗಿದೆ ಯೋಜನೆಯ ಪ್ರಗತಿ ನನಗೆ ಸಮಾಧಾನ ತಂದಿಲ್ಲ. ಅನೇಕ ಸಮಸ್ಯೆಗಳನ್ನು ಗುತ್ತಿಗೆದಾರರು, ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ. ಯೋಜನೆ ಪೂರ್ಣಗೊಳ್ಳಲು ಕೆಲವು ತಾಂತ್ರಿಕ ಅಡಚಣೆಗಳು ಎದುರಾಗಿರುವುದರಿಂದ ಗುತ್ತಿಗೆದಾರರು ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದರು.

ಇದೇ ವೇಳೆ ಎತ್ತಿನಹೊಳೆ ಕಾಮಗಾರಿಗೆ ವಿನಾಕಾರಣ ಯಾರಾದರೂ ಅಡ್ಡಿಪಡಿಸಿದಲ್ಲಿ ಅಂಥವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕಾಲಮಿತಿ ನಿಗದಿ

ಹಿಂದಿನ ಸರಕಾರ ಕಾಮಗಾರಿ ನಡೆಸಲು ಇರುವ ಅಡಚಣೆಗಳನ್ನು ಬಗೆಹರಿಸಲು ಬದ್ಧತೆ ತೋರದ ಪರಿಣಾಮ ಯೋಜನೆಯ ಪ್ರಗತಿ ಕುಂಠಿತಗೊಂಡಿದೆ. ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅರಣ್ಯ ಇಲಾಖೆ, ವಿದ್ಯುತ್‌ ಇಲಾಖೆ ಹಾಗೂ ಗುತ್ತಿಗೆದಾರರಿಗೆ ಕಾಲಮಿತಿ ನಿಗದಿಪಡಿಸಿದ್ದು, ನೂರು ದಿನಗಳ ಒಳಗಾಗಿ ಮೊದಲ ಟ್ರಯಲ್‌ ರನ್‌ ಮಾಡಲು ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ಡಿಕೆಶಿ ಹೇಳಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next