Advertisement

ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನ ಇವಿಗಳ ಬ್ಯಾಟರಿ ಪರೀಕ್ಷಾ ಮಾನದಂಡಕ್ಕೆ ತಿದ್ದುಪಡಿ

09:26 PM Sep 02, 2022 | Team Udayavani |

ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನ(ಇವಿ)ಗಳ ಬ್ಯಾಟರಿ ಪರೀಕ್ಷಾ ಮಾನದಂಡಗಳ ತಿದ್ದುಪಡಿಗೆ ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.

Advertisement

ದೇಶದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಸರಣಿ ವಿದ್ಯುತ್‌ ಅವಘಡಗಳ ಹಿನ್ನೆಲೆಯಲ್ಲಿ ಸುರಕ್ಷತಾ ಮಾನದಂಡಗಳನ್ನು ಹೆಚ್ಚಿಸುವ ಮೂಲಕ ಎಲೆಕ್ಟ್ರಿಕ್‌ ವಾಹನಗಳ ಸುರಕ್ಷತೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಅವಘಡಗಳ ಕುರಿತು ಪರಿಶೀಲಿಸಲು ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿ ವಿದ್ಯುತ್‌ಚಾಲಿತ ವಾಹನಗಳ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳು, ಅನುಸರಿಸಬೇಕಾದ ಮಾನದಂಡಗಳ ಕುರಿತು ಶಿಫಾರಸು ಮಾಡಿದೆ.

ಸಮಿತಿ ಸಲ್ಲಿಸಿದ ವರದಿಯನ್ನು ಸರ್ಕಾರ ಪರಿಶೀಲಿಸಿದ್ದು, ನೂತನ ಬ್ಯಾಟರಿ ಪರೀಕ್ಷಾ ನಿಯಮಗಳು ಇದೇ ಅಕ್ಟೋಬರ್‌ 1ರಿಂದ ಜಾರಿಗೆ ಬರಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next