Advertisement

ನಿಗದಿತ ಅವಧಿಯಲ್ಲಿ ಮೌಲ್ಯಮಾಪನ ಕಾರ್ಯಪೂರ್ಣ: ಸಚಿವ ಸುರೇಶ್‌ ಕುಮಾರ್‌

09:33 PM Jun 01, 2020 | Sriram |

ಬೆಂಗಳೂರು: ರಾಜ್ಯದಲ್ಲಿ ಎಂಟು ಜಿಲ್ಲೆಗಳ 34 ಕೇಂದ್ರಗಳಲ್ಲಿ ದ್ವಿತೀಯ ಪಿಯು ವಿವಿಧ ವಿಷಯಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 6500 ಉಪನ್ಯಾಸಕರು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದು, ನಿಗದಿತ ಅವಧಿಯಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದರು.

Advertisement

ಬೆಂಗಳೂರಿನ ವಿಜಯ ಹಾಗೂ ಎಸ್‌ ಎಸ್‌ಎಂ ಆರ್‌ ವಿ ಕಾಲೇಜುಗಳಲ್ಲಿನ ಮೌಲ್ಯಮಾಪನ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿದ ಸಚಿವರು, ಪಿಸಿಎಂಬಿ ಹಾಗೂ ಇನ್ನೂ ನಡೆಯದಿರುವ ಇಂಗ್ಲಿಷ್‌ ಪರೀಕ್ಷಾ ಪತ್ರಿಕೆ ಹೊರತುಪಡಿಸಿ ಉಳಿದೆಲ್ಲ ವಿಷಯಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದೆ.

ಇಂತಹ ಸಂದರ್ಭದಲ್ಲಿಯೂ ಉಪನ್ಯಾಸಕರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಕೋವಿಡ್‌ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್‌ ವಲಯಗಳು, ಅನಾರೋಗ್ಯ ಪೀಡಿತರು, ಗರ್ಭಿಣಿಯರು ಸೇರಿದಂತೆ ಹಲವು ವ್ಯಕ್ತಿಗಳಿಗೆ ಮೌಲ್ಯಮಾಪನ ಪ್ರಕ್ರಿಯೆಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಸಮರ್ಥ ಉಪನ್ಯಾಸಕರು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸ್ವಯಂಪ್ರೇರಿತರಾಗಿ ಮುಂದಿನ ದಿನಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪಿಸಿಎಂಬಿ ವಿಷಯಗಳ ಮೌಲ್ಯಮಾಪನಕ್ಕೆ ಹೆಚ್ಚುವರಿ ಉಪನ್ಯಾಸಕರ ಅಗತ್ಯತೆ ಇದ್ದು, ನಗರ ಕೇಂದ್ರಗಳಲ್ಲಿ ವಸತಿ, ಆಹಾರ ಸೌಕರ್ಯಗಳ ಲಭ್ಯತೆ ಆಧಾರದ ಮೇಲೆ ಆರಂಭ ದಿನಾಂಕ ನಿರ್ಧರಿಸಲಾಗುವುದು. ಜೂನ್‌ 18 ರಂದು ನಡೆಯಲಿರುವ ಇಂಗ್ಲಿಷ್‌ ಭಾಷಾ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next