Advertisement

ನಾಳೆಯಿಂದ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ

02:31 PM Jul 12, 2020 | Suhan S |

ಬಳ್ಳಾರಿ: ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಜುಲೈ 13ರಿಂದ ಪ್ರಾರಂಭಗೊಳ್ಳುವುದರಿಂದ ಕೋವಿಡ್‌-19 ಎಸ್‌ಒಪಿ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಲು ಮತ್ತು ಅಗತ್ಯ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಡಿಡಿಪಿಐ ಸಿ. ರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಒಟ್ಟು 3035 ಜಂಟಿ ಮೌಲ್ಯಮಾಪಕರು, ಉಪ ಮೌಲ್ಯಮಾಪಕರು, ಸಹಾಯಕ ಮೌಲ್ಯಮಾಪಕರು ಪರೀಕ್ಷೆಗೆ ಹಾಜರಾಗುತ್ತಿದ್ದು ಒಟ್ಟು 8+5 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಎಲ್ಲ ಮೌಲ್ಯಮಾಪನ ಕೇಂದ್ರಗಳಿಗೆ ಜಂಟಿ ಮೌಲ್ಯಮಾಪಕರು, ಉಪಮುಖ್ಯ ಮೌಲ್ಯಮಾಪಕರು, ಸಹಾಯಕ ಮೌಲ್ಯಮಾಪಕರನ್ನು ನೇಮಿಸಲಾಗಿದೆ. ಎಲ್ಲ ಮೌಲ್ಯಮಾಪನ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಲಾಗುತ್ತದೆ. ಪ್ರತಿ ಮೌಲ್ಯಮಾಪನ ಕೇಂದ್ರಕ್ಕೆ ಇಲಾಖೆಯಿಂದ ಈ ಹಿಂದೆ ಪರೀಕ್ಷಾ ಕಾರ್ಯಕ್ಕೆ ನೀಡಿದ್ದ ಥರ್ಮಾಮೀಟರ್‌ಗಳನ್ನು ಬಳಕೆ ಮಾಡಿಕೊಂಡು ಆರೋಗ್ಯ ಸುರಕ್ಷತೆ ಕಾಪಾಡಿಕೊಳ್ಳಲಾಗುತ್ತಿದೆ. ದೈಹಿಕ ಅಂತರ ಕಾಪಾಡಿಕೊಂಡು ಮೌಲ್ಯಮಾಪನ ಜರುಗಿಸಲಾಗುವುದು. ಪ್ರತಿದಿನ ಬೆಳಗ್ಗೆ 8.30ಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕು. ಪರೀûಾ ಕೇಂದ್ರದ ಸುತ್ತಮುತ್ತ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಾಮಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next