Advertisement
ಮೂರು ತರಗತಿಗಳ ಮೌಲ್ಯಾಂಕನ ಪರೀಕ್ಷೆಗೆ ಒಟ್ಟು 28.14 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು ಸೋಮವಾರದ ಪರೀಕ್ಷೆಗೆ ಹಾಜರಾಗಿದ್ದಾರೆ. ಶಾಲಾ ಹಂತದಲ್ಲಿ ಪರೀಕ್ಷೆ ನಡೆದಿರುವ ಕಾರಣ, ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಬಳಿ ನಿಖರ ಮಾಹಿತಿ ಸೋಮವಾರ ತಡರಾತ್ರಿಯವರೆಗೂ ಲಭ್ಯವಾಗಿಲ್ಲ. ಮೊದಲ ದಿನ ಕನ್ನಡ ಪರೀಕ್ಷೆ ನಡೆದಿದ್ದು ಮಂಗಳವಾರ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
ರಾಜ್ಯ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಮೌಲ್ಯಾಂಕನ ಪರೀಕ್ಷೆಯನ್ನು ರದ್ದುಪಡಿಸಿದ್ದರೆ ದ್ವಿಸದಸ್ಯ ನ್ಯಾಯಪೀಠ ಪರೀಕ್ಷೆಗೆ ಅವಕಾಶ ಕಲ್ಪಿಸಿತ್ತು. ಪರೀಕ್ಷೆಗೆ ಅವಕಾಶ ಕಲ್ಪಿಸಿರುವ ಹೈಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸುಪ್ರೀಂಕೋರ್ಟ್‌ಗೆ ಹೋಗಿವೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಮಂಗಳವಾರ ನಿಗದಿಯಾಗುತ್ತಿದ್ದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ವಕೀಲರು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಇ-ಮೇಲ್ ಕಳುಹಿಸಿ ಸೋಮವಾರದಿಂದ ನಿಗದಿಯಾಗಿರುವ ಮೌಲ್ಯಾಂಕನ ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಆದರೆ ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆ ಪರೀಕ್ಷೆ ಮುಂದುವರಿಸಿದೆ.