Advertisement
ಮಂಗಳವಾರ ಬೆಳಗ್ಗೆ ಜೆ.ಪಿ.ನಗರ ನಿವಾಸದಿಂದ ಹೊರಟು ಇದೇ ಮಾರ್ಗವಾಗಿ ಬಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಭಟನೆ ನಡೆಸುತ್ತಿರುವುದನ್ನು ಗಮನಿಸಿ ತಕ್ಷಣ ವಾಹನ ನಿಲ್ಲಿಸುವಂತೆ ಸೂಚನೆ ನೀಡಿ ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳ ಬಳಿ ಚರ್ಚಿಸಿದರು.
Related Articles
Advertisement
ಬಜೆಟ್‌ನಲ್ಲಿ ಕೃಷಿಗೆ ಪೂರಕವಾದ ಕಾರ್ಯಕ್ರಮಗಳನ್ನು ಅಳವಡಿಸಲು ಮುಖ್ಯಮಂತ್ರಿಗಳು ಆದ್ಯತೆ ನೀಡಿದ್ದಾರೆ. ರೈತರ ಸಾಲ ಮನ್ನಾ ಬಗ್ಗೆಯೂ ಚರ್ಚೆ ನಡೆದಿದ್ದು, ರೈತರ ಪರ ನಿಲುವು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರಾಜಧಾನಿಯಲ್ಲಿ ಉಪವಾಸ ಸತ್ಯಾಗ್ರಹ: ಬುಧವಾರ ಬೆಂಗಳೂರು ಕೃಷಿ ವಿವಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು. ಪೊಲೀಸರ ಅನುಮತಿ ಪಡೆದು ಗುರುವಾರದಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಂಗಳೂರು ಕೃಷಿ ವಿವಿ ವಿದ್ಯಾರ್ಥಿಗಳ ವತಿಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು. ಸರ್ಕಾರದ ಸ್ಪಂದನೆ ಆಧರಿಸಿ ಮುಂದೆ ಹೋರಾಟದಲ್ಲಿ ಇತರೆ ವಿವಿಗಳ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಬಗ್ಗೆ ನಿರ್ಧರಿಸಲಾಗುವುದು ಎಂದು ಜಿಕೆವಿಕೆ ಕೃಷಿ ವಿದ್ಯಾರ್ಥಿ ಸಂಘದ ಸಂಚಾಲಕ ವಿ.ರಮೇಶ ಹೇಳಿದರು.
ಧರಣಿ ಮುಂದುವರಿಕೆ: ಮುಖ್ಯಮಂತ್ರಿಗಳ ಭರವಸೆ ಹೊರತಾಗಿಯೂ ಕೃಷಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ಹಿಂದಿನ ಸರ್ಕಾರದಂತೆ ಸಮ್ಮಿಶ್ರ ಸರ್ಕಾರವೂ ಭರವಸೆ ನೀಡಿದ್ದು, ವಿಧೇಯಕಕ್ಕೆ ತಿದ್ದುಪಡಿ ತರುವ ಬಗ್ಗೆ ವಿಶ್ವಾಸ ಮೂಡಿಲ್ಲ.
ದೊಡ್ಡಬಳ್ಳಾಪುರದಲ್ಲಿ ಸ್ಥಾಪನೆಯಾಗಿರುವ ರೈಟೆಕ್ ವಿಶ್ವವಿದ್ಯಾಲಯವು ಕೃಷಿ ವಿಶ್ವವಿದ್ಯಾಲಯ ಕಾಯ್ದೆಯನ್ನು ಉಲ್ಲಂ ಸಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳುವ ದಿಟ್ಟತನ ತೋರಬೇಕಿದೆ. ಹಾಗಾಗಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಜಿಕೆವಿಕೆ ಕೃಷಿ ವಿದ್ಯಾರ್ಥಿ ಸಂಘದ ಸಂಚಾಲಕ ವಿ.ರಮೇಶ ತಿಳಿಸಿದರು.