Advertisement

ಮಾಧ್ಯಮ ಇಂಗ್ಲಿಷ್‌ ಆಗಿದ್ದರೂ, ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು!

10:36 PM Apr 19, 2023 | Team Udayavani |

ನವದೆಹಲಿ: ಸಿಎಪಿಎಫ್ (ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಗಳು) ಪರೀಕ್ಷೆಗಳನ್ನು ದೇಶದ 13 ಸ್ಥಳೀಯ ಭಾಷೆಗಳಲ್ಲಿ ಬರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಮತ್ತೂಂದು ಮಹತ್ವದ ಬೆಳವಣಿಗೆ ನಡೆದಿದೆ.

Advertisement

ಇದೀಗ ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಆಯೋಗ) ವಿದ್ಯಾರ್ಥಿಯೊಬ್ಬ ಇಂಗ್ಲಿಷ್‌ ಮಾಧ್ಯಮದಲ್ಲಿ ಕೋರ್ಸ್‌ ತೆಗೆದುಕೊಂಡಿದ್ದರೂ, ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಅವಕಾಶ ಕೊಡಬೇಕು ಎಂದು ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ. ಇದಕ್ಕಾಗಿಯೇ ಮೌಲ್ಯಮಾಪಕರನ್ನು ವ್ಯವಸ್ಥೆ ಮಾಡಬೇಕು, ಪಠ್ಯಪುಸ್ತಕಗಳನ್ನು ಸಿದ್ಧಪಡಿಸಬೇಕು ಎಂದು ಯುಜಿಸಿ ಮುಖ್ಯಸ್ಥ ಎಂ.ಜಗದೀಶ್‌ ಕುಮಾರ್‌ ಹೇಳಿದ್ದಾರೆ. ದೇಶದಲ್ಲಿ ಇಂಗ್ಲಿಷ್‌ ಭಾಷೆಯ ಒತ್ತಡದ ಪರಿಣಾಮವಾಗಿ ಸ್ಥಳೀಯ ಭಾಷೆಗಳು ಅಳಿವಿನಂಚಿಗೆ ತಲುಪಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಮತ್ತು ಯುಜಿಸಿಗಳು ನೀಡಿರುವ ಈ ಅವಕಾಶ ಮಹತ್ವದ್ದಾಗಿದೆ. ಶಿಕ್ಷಣದಲ್ಲಿ ಸ್ಥಳೀಯ ಭಾಷೆಯನ್ನು ಬಳಸುವುದು, ಅದಕ್ಕೆ ಉತ್ತೇಜನ ನೀಡುವುದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯ ಆದ್ಯತೆಯಾಗಿದೆ. ಮಾತೃಭಾಷೆ, ಸ್ಥಳೀಯ ಭಾಷೆಗಳ ಮಹತ್ವವನ್ನು ನೂತನ ಶಿಕ್ಷಣ ನೀತಿ ಎತ್ತಿ ಹಿಡಿಯುತ್ತದೆ. ಒಮ್ಮೆ ಸ್ಥಳೀಯ ಭಾಷೆಯಲ್ಲಿ ಶಿಕ್ಷಣ ನೀಡಲು ಆರಂಭಿಸಿದರೆ, ನಿಧಾನಕ್ಕೆ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯೂ ಹೆಚ್ಚುತ್ತದೆ ಎಂದು ಜಗದೀಶ್‌ ಭರವಸೆ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next