Advertisement

ಪ್ರತಿಪಕ್ಷಗಳು ಒಟ್ಟಾದರೂ ಪ್ರಧಾನಿ ಮೋದಿಯವರನ್ನು ಸೋಲಿಸಲು ಸಾಧ್ಯವಿಲ್ಲ: ಬೊಮ್ಮಾಯಿ

01:02 PM Jul 16, 2023 | Team Udayavani |

ಹುಬ್ಬಳ್ಳಿ: ಪ್ರತಿಪಕ್ಷಗಳು ಒಟ್ಟಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪ್ರಯತ್ನಿಸುತ್ತಿದ್ದು, ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರತಿ ಪಕ್ಷಗಳು ಭಾರತದಲ್ಲಿ ಶಕ್ತಿಯುತವಾಗಿಲ್ಲ. ಪ್ರಾದೇಶಿಕ ಪಕ್ಷಗಳೇ ಹೆಚ್ಚಾಗಿವೆ. ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ದಿಷ್ಟವಾದ ಕಾರ್ಯಕ್ರಮವಿಲ್ಲ. ಮೋದಿಯವರನ್ನು ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ, ಅದು ಆಗುವುದಿಲ್ಲ ಎಂದರು.

ಜೆಡಿಎಸ್ ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ಅದು ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ನಡುವೆ ಇರುವ ಮಾತುಕತೆ. ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ. ಮಾತುಕತೆ ಪಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದರು.

ಇದನ್ನೂ ಓದಿ:RCB ಮೇಲೆ ತುಂಬಾ ಸಿಟ್ಟು ಬಂದಿತ್ತು..: ಮನ ಬಿಚ್ಚಿ ಮಾತನಾಡಿದ ಯುಜಿ ಚಾಹಲ್

ವಿಪಕ್ಷ ನಾಯಕನ ಸ್ಥಾನ ಜು. 18 ರ ನಂತರ ಘೋಷಣೆ ಆಗಬಹುದು ಎಂಬ ಮಾಹಿತಿಯಿದೆ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕೇವಲ ಉಹಾಪೋಹ ಎಂದು ಬೊಮ್ಮಾಯಿ ಹೇಳಿದರು.

Advertisement

ಗೃಹ ಲಕ್ಷ್ಮಿ ಈಗಾಗಲೇ ಎಡವಟ್ಟಾಗಿದೆ. ದಿನಾಂಕ ಮೇಲೆ ದಿನಾಂಕ ಮುಂದೂಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಗಳಿಗೆ ಯಾವುದೇ ನಿರ್ದಿಷ್ಟವಾದ ನಿಯಮಗಳನ್ನು ಮಾಡುತ್ತಿಲ್ಲ. ದೊಡ್ಡ ಭಾರ ಆಗುತ್ತಿರುವ ಗೃಹಲಕ್ಷ್ಮಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಕಡಿಮೆ ಅವಧಿಯಲ್ಲಿ ಕೆಲವರಿಗೆ ಮಾತ್ರ ಕೊಡಬೇಕು ಎನ್ನುವ ಉದ್ದೇಶ ಸರಕಾಕ್ಕಿದೆ. ತಾಯಂದಿರಿಗೆ, ರಾಜ್ಯದ ಹೆಣ್ಣುಮಕ್ಕಳಿಗೆ ಭ್ರಮನಿರಸನ ಮಾಡುವಂತಹ ಉದ್ದೇಶ ಈ ಯೋಜನೆಯಾಗಿದೆ ಎಂದು ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next