Advertisement

Caste Census Report ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ: ಸಿದ್ದರಾಮಯ್ಯ

02:38 PM Nov 23, 2023 | Team Udayavani |

ಬಾಗಲಕೋಟೆ: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿ, ಅವರನ್ನು ಕರೆದು ಮಾತನಾಡುತ್ತೇನೆ ಎಂದರು.

ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ವರದಿಯಲ್ಲಿ ಏನಿದೆ ಎಂದು ಗೊತ್ತಿದೆಯೇ ಎಂದರು. ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡಬಾರದು. ಸಮಾಜ ಯಾಕೆ ಒಡೆಯುತ್ತೇವೆ ಎಂದು ಪ್ರಶ್ನಿಸಿದರು. ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ. ಸಮಾಜ ಒಡೆದು ಬಿಟ್ಟರೆ ಎಂದರು.

ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು.

Advertisement

ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ.

ಅರವಿಂದ ಲಿಂಬಾವಳಿಯವರು ವಿರೋಧ ಪಕ್ಷದ ನಾಯಕನ ಆಯ್ಕೆ ಹಾಗೂ ಪಕ್ಷದ ಅಧ್ಯಕ್ಷರ ಆಯ್ಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮತ್ತು ವಿ.ಸೋಮಣ್ಣ 6 ನೇ ತಾರೀಖಿನ ನಂತರ ತಮ್ಮ ಅನಿಸಿಕೆ ತಿಳಿಸುವ ಬಗ್ಗೆ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರನವರನ್ನು ಅಧ್ಯಕ್ಷರನ್ನಾಗಿ ಹಾಗೂ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಿದ ಮೇಲೆ ಬೆಂಕಿ ಹತ್ತಿಕೊಂಡಿದೆ. ಬಹಳಷ್ಟು ಜನರಿಗೆ ಅಸಮಾಧಾನವಾಗಿದೆ. ಇದು ಏನಾಗುತ್ತದೆ ಎಂದು ಗೊತ್ತಿಲ್ಲ. ಅದು ಜ್ವಾಲೆಯಾಗುತ್ತದೆಯೋ ಅವರ ಬುಡಕ್ಕೆ ಬೆಂಕಿ ಹತ್ತುಕೊಳ್ಳುತ್ತದೆಯೋ ಗೊತ್ತಿಲ್ಲ. ಬೆಂಕಿ ಅಂತೂ ಹತ್ತಿಕೊಂಡಿದೆ ಎಂದರು.

ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕು: ನಾವು ಯಾರನ್ನೂ ಕಾಂಗ್ರೆಸ್ಸಿಗೆ ಕರೆಯುವುದಿಲ್ಲ. ಅವರಾಗಿಯೇ ಬಂದರೆ ಸೇರಿಸಿಕೊಳ್ಳುತ್ತೇವೆ. ನಾನು ಯಾರನ್ನೂ ಸಂಪರ್ಕಿಸಿಲ್ಲ. ಯಾರು ನಮ್ಮ ನಾಯಕತ್ವವನ್ನು ಒಪ್ಪಿಕೊಂಡು ಅವರಾಗಿಯೇ ಬರುತ್ತಾರೋ ಅವರನ್ನು ಸೇರಿಸಿಕೊಂಡಿದ್ದೇವೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನೂ ಬನ್ನಿ ಎಂದು ಕರೆಯಲು ಹೋಗಿಲ್ಲ. ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕಲ್ಲ. ಬಿಜೆಪಿಯಲ್ಲಿ ಬಹಳ ವರ್ಷ ಇದ್ದವರು ಆ ಸಿದ್ಧಾಂತವನ್ನು ಒಪ್ಪಿರುತ್ತಾರೆ. ಅದನ್ನು ಬಿಟ್ಟು ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next