ಬಳ್ಳಾರಿ: ಪ್ರಜ್ವಲ್ ರೇವಣ್ಣ ಪ್ರಕರಣ ಕಾನೂನು ಹಂತದಲ್ಲಿ ತನಿಖೆ ನಡೆಯುತ್ತಿದ್ದರೂ ಬಿಜೆಪಿಯವರು ಅನಾವಶ್ಯಕವಾಗಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ತಿರುಗೇಟು ನೀಡಿದರು.
Advertisement
ಲೋಕಸಭೆ ಚುನಾವಣೆ ನಿಮಿತ್ತ ನಗರದ ನೆಹರೂ ಕಾಲೋನಿಯ ವುಂಕಿ ಮರಿಸಿದ್ದಮ್ಮ ಶಾಲೆ ಮತಗಟ್ಟೆಯಲ್ಲಿ ಸರತಿ ಸಾಲಲ್ಲಿ ನಿಂತು ಕುಟುಂಬ ಸಮೇತ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಜ್ವಲ್ ರೇವಣ್ಣ ಪ್ರಕರಣ ಬಿಜೆಪಿ ಜೆಡಿಎಸ್ ಮೈತ್ರಿ ಮೇಲೆ ಪರಿಣಾಮ ಬೀರಿದೆ. ಅದಕ್ಕಾಗಿ ಬಿಜೆಪಿಯವರು ಕಾಂಗ್ರೆಸ್ ಮೇಲೆ ವಿನಾಕಾರಣ ಆರೋಪಮಾಡುತ್ತಿದೆ. ಮುಖ್ಯವಾಗಿ ಕರ್ನಾಟಕದ ಚುನಾವಣೆ ಮೇಲೆ ಪ್ರಜ್ವಲ್ ಪ್ರಕರಣ ಪ್ರಭಾವ ಬೀರಿದೆ.
ಭಾಗಿಯಾಗಿಲ್ಲ ಎಂದು ಪ್ರಜ್ವಲ್ ಕಾರು ಚಾಲಕ ಹೇಳಿಕೆ ನೀಡಿದ್ದಾರೆ. ಇದು ನನ್ನ ವೈಯಕ್ತಿಕ ಅಂತ ಚಾಲಕ ಈಗಾಗಲೇ ಸಷ್ಟಪಡಿಸಿದ್ದಾರೆ. ಆದರೂ, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ.
Related Articles
Advertisement
ಬಿರುಬಿಸಿಲು ಲೆಕ್ಕಿಸದೆ ಜನರು ಮತದಾನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ನಾಗೇಂದ್ರ, ಮೊದಲ ಹಂತಕ್ಕಿಂದ ಎರಡನೇ ಹಂತದ ಚುನಾವಣೆ ಉತ್ತಮವಾಗಿದೆ. ಗ್ಯಾರೆಂಟಿಗಳಿಂದ ಮಹಿಳೆಯರು ಹೆಚ್ಚು ಮತದಾನ ಮಾಡುತ್ತಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಶೇ.70ಕ್ಕಿಂತ ಹೆಚ್ಚು ಮತದಾನ ಆಗುವ ವಿಶ್ವಾಸವಿದೆ ಎಂದರು.