Advertisement
ಅವರು ಗುರುವಾರ ಹೋದ ವಾರದಂತೆ ಈ ವಾರವೂ ಸಮೂಹ ಸಾರಿಗೆಯಲ್ಲಿ ಕಚೇರಿಗೆ ತೆರಳುವಾಗ ಈ ವಿಷಯದ ಬಗ್ಗೆ ತಿಳಿಸಿದರು.
ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಉದ್ದೇಶದಿಂದ ಈಗಾಗಲೇ ಪ್ರತಿ ಗುರುವಾರ ಕಚೇರಿಗೆ ಸಮೂಹ ಸಾರಿಗೆಯಲ್ಲಿ ವಿವಿಧ ಅಧಿಕಾರಿಗಳು ಮತ್ತು ಸಿಬಂದಿಯೊಂದಿಗೆ ಪ್ರಯಾಣಿಸುವುದರ ಮೂಲಕ ವಾಯು ಮಾಲಿನ್ಯ ನಿಯಂತ್ರಣಕ್ಕೆ ಸಾಧ್ಯವಾದಷ್ಟು ಕೊಡುಗೆ ನೀಡಲು ನಿರ್ಧರಿಸಲಾಗಿದೆ. ಇದೇ ಮಾದರಿಯಲ್ಲಿ ಜಿಲ್ಲೆಯ ವಿವಿಧ ಖಾಸಗಿ ಸಂಸ್ಥೆಗಳು, ಬ್ಯಾಂಕ್‌ಗಳು, ಕಾರ್ಪೊàರೇಟ್ ಸಂಸ್ಥೆಗಳು ತಮ್ಮ ಸಿಬಂದಿಗಳಿಗೆ ವಾರದಲ್ಲಿ ಒಂದು ದಿನ ಸಮೂಹ ಸಾರಿಗೆ ವ್ಯವಸ್ಥೆ ಕಲ್ಪಿಸುವುದರ ಮೂಲಕ ಪರಿಸರ ಸಂರಕ್ಷಣೆ ತಮ್ಮದೆ ಆದ ಕೊಡುಗೆ ನೀಡಬಹುದು ಎಂದು ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದರು.
Related Articles
ಸಮೂಹ ಸಾರಿಗೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬಂದಿ ಉಪಸ್ಥಿತರಿದ್ದರು.
Advertisement