Advertisement

ಪ್ರತಿ ತಾಲೂಕಿಗೊಂದು ವೀರಶೈವ ಲಿಂಗಾಯತ ವಿದ್ಯಾರ್ಥಿ ವಸತಿ ನಿಲಯ: ಈಶ್ವರ ಖಂಡ್ರೆ

06:15 PM Sep 27, 2019 | Sriram |

ಬೀದರ: ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಈಗಾಗಲೇ ಬೆಂಗಳೂರಿನಲ್ಲಿ ಉಚಿತ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಐಎಎಸ್, ಕೆಎಎಸ್ ತರಬೇತಿಗಾಗಿ ತರಬೇತಿ ಕೇಂದ್ರವನ್ನೂ ಆರಂಭಿಸಲಾಗಿದೆ. ಇದೀಗ ವೀರಶೈವ ಲಿಂಗಾಯತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತಿ ತಾಲ್ಲೂಕಿಗೊಂದು ವಿದ್ಯಾರ್ಥಿ ವಸತಿ ನಿಲಯ ಸ್ಥಾಪಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಹೇಳಿದರು.

Advertisement

ನಗರದ ವಿದ್ಯಾನಗರ ಕಾಲೊನಿಯ ಶ್ರೀಮತಿ ಲಕ್ಷ್ಮೀ ಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದಲ್ಲಿ 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಹಾನಗಲ್ ಕುಮಾರಶಿವಯೋಗಿಗಳ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೌಲ್ಯಯುತ ಶಿಕ್ಷಣದ ಕೊರತೆಯೇ ಪ್ರಸ್ತುತ ಸಮಾಜದಲ್ಲಿ ಅನ್ಯಾಯ, ಅನೀತಿ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕಾರಣವಾಗಿದೆ. ವ್ಯಸನಗಳಿಗೆ ದಾಸರಾಗಿ ಮಕ್ಕಳೇ ತಂದೆ ತಾಯಿಯನ್ನು ಕೊಲೆ ಮಾಡುತ್ತಿರುವ ಪ್ರಕರಣಗಳು ಬೇಸರ ಉಂಟು ಮಾಡುತ್ತಿವೆ. ಮಕ್ಕಳಿಗೆ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ಇಂದಿನ ಮಕ್ಕಳಿಗೆ ಅವಶ್ಯಕತೆಯಾಗಿದೆ. ವಚನ ಸಾಹಿತ್ಯದ ಅಧ್ಯಯನದಿಂದ ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸಬಹುದಾಗಿದೆ ಎಂದು ಸಲಹೆ ಮಾಡಿದರು.

ಮಹಾಸಭಾ ಬೀದರ್ ಜಿಲ್ಲಾ ಘಟಕ ಹಲವು ವರ್ಷಗಳಿಂದ ಪ್ರತಿಭಾ ಪುರಸ್ಕಾರದ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದೆ. ವಿವಿಧ ಕ್ಷೇತ್ರಗಳ ಸಾಧಕರನ್ನೂ ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿದೆ. ಇಡೀ ರಾಜ್ಯದಲ್ಲಿ ಬೀದರ ಜಿಲ್ಲೆಯ ಸಂಘಟನೆ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next