Advertisement
ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ನಂತರ ಮಾತನಾಡಿದ ಅವರು, ಉಪ ಚುನಾವಣೆಗೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಎಲ್ಲ ನಾಯಕರು ಕೂಡಿಯೇ ಚರ್ಚಿಸಿ ತೀರ್ಮಾನ ಮಾಡಿದ್ದೇವು. ಕೇವಲ ಸಿದ್ದರಾಮಯ್ಯ ಅವರನ್ನು ಮಾತ್ರ ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ಅವರು ತಮ್ಮ ರಾಜಿನಾಮೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಉಪ ಚುನಾವಣೆಯ ಬೆಳವಣಿಗೆಯ ಬಗ್ಗೆ ಹೈಕಮಾಂಡ್ ನಮ್ಮ ಜೊತೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ ಎಂದು ಹೇಳಿದರು.
ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಕುರಿತು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಮಾಹಿತಿ ಪಡೆದುಕೊಂಡಿದ್ದಾರೆ.
Related Articles
Advertisement