Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೇಲಿಂದ ಸೂಚನೆ ಬಂದ ಹಾಗೆ ವರ್ತಿಸ್ತಾರೆ ಅಷ್ಟೇ. ನನಗೂ, ಅದಕ್ಕೂ ಸಂಬಂಧ ಇಲ್ಲ. ಮಂಡ್ಯ ಲೋಕಸಭಾ ಚುನಾವಣೆ ಸಂದರ್ಭ 56 ಕಡೆ ಐಟಿ ದಾಳಿ ಆಯ್ತು ಅಲ್ವಾ ?’ ಎಂದು ಪ್ರಶ್ನಿಸಿದರು. ‘ಕೃಷ್ಣ ನನಗಿಂತ 1 ವರ್ಷ ಹಿರಿ ಯರು. ಈಗ ಅವರು ಇದನ್ನು ಸಹಿಸಿಕೊಳ್ಳಬೇಕಾದ ಪರಿಸ್ಥಿತಿ. ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿ ಬಂದಿದ್ದೇನೆ’ ಎಂದು ಹೇಳಿದರು.
ಬೆಂಗಳೂರು: ‘ಸಿದ್ಧಾರ್ಥ ನಾಪತ್ತೆ ಪ್ರಕರಣದ ಬಗ್ಗೆ ತನಿಖೆ ಆಗಬೇಕಿದೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಕೃಷ್ಣ ಅವರ ಮನೆಗೆ ಭೇಟಿ ನೀಡಿ, ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಸಿದ್ದಾರ್ಥ ಧೈರ್ಯವಂತರು. ಆತ್ಮಹತ್ಯೆ ಬಗ್ಗೆ ಯೋಚಿಸುವ ವ್ಯಕ್ತಿ ಅಲ್ಲ. ಈ ಪ್ರಕರಣದ ಬಗ್ಗೆ ತನಿಖೆ ಆಗಬೇಕು’ ಎಂದು ಆಗ್ರಹಿಸಿದರು. ಅವರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಅವರು ಕಿಡ್ನ್ಯಾಪ್ ಆಗಿದ್ದಾರೋ ಅಥವಾ ಮತ್ತೇನಾಗಿದ್ದಾರೋ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ ಎಂದರು.