ಚಾಮರಾಜನಗರ ಜಿಲ್ಲೆಯ ಇತಿಹಾಸ ವಿಷಯ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
Advertisement
ರಾಜ್ಯ ಪತ್ರಾಗಾರವು ಸ್ಥಳೀಯ ಇತಿಹಾಸದ ಅಧಿಕೃತ ದಾಖಲೆಗಳನ್ನು ಸಂರಕ್ಷಿಸುತ್ತಾ ಬಂದಿದೆ. ತಮ್ಮ ಸ್ಥಳೀಯ ಪ್ರದೇಶದ ಹಿನ್ನಲೆಯನ್ನು ತಿಳಿದು ಕೊಳ್ಳುವುದು ಅತ್ಯಗತ್ಯವಾಗಿದೆ. ಇಂದಿನ ತಂತ್ರಜ್ಞಾನದಿಂದ ಮಾಹಿತಿಗಳನ್ನು ಇಲಾಖೆ ವೆಬ್‌ಸೈಟ್‌ಗಳಲ್ಲಿಯೂ ಸಹ ಅಳವಡಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗವಿಸಿದ್ದಯ್ಯ ಸಲಹೆ ಮಾಡಿದರು. ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ.ಆರ್. ಸುಮತಿ ಮಾತನಾಡಿ, ಜಿಲ್ಲೆಯ ಇತಿಹಾಸ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಆಯೋಜಿಸಿರುವುದು ಇದೇ ಪ್ರಥಮವಾಗಿದ್ದು ತುಂಬ ವಿಶೇಷ ವಾಗಿದೆ. ಜಿಲ್ಲೆಯ ಜನತೆ ಇಲ್ಲಿನ ನೆಲ, ಜಲ, ಇತಿಹಾಸವನ್ನು ತಿಳಿದು ಕೊಳ್ಳುವುದು ಕರ್ತವ್ಯವೆಂದೇ ಭಾವಿಸಬೇಕು ಎಂದರು.
Related Articles
Advertisement
ಮೈಸೂರಿನ ಸಿದ್ದಾರ್ಥನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಬೇಬಿ ಬಿ. ಪ್ರೇಮಲತಾ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಪೊ›. ಕೆ.ಸಿ. ವೀರಭದ್ರಯ್ಯ, ವಿಭಾಗೀಯ ಪತ್ರಾಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಸಹಾಯಕ ನಿರ್ದೇಶಕ ನಾಗೇಂದ್ರ ಪ್ರಸಾದ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಮಹದೇವ ಶಂಕನಪುರ ಇದ್ದರು.