ಯಲಹಂಕ: ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ರಚನಾತ್ಮಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರಬೇಕು ಎಂದು ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ನಿರ್ದೇಶಕ ವಿಜಯಕುಮಾರ್ ರಾಜು ತಿಳಿಸಿದರು.
ಲಯನ್ಸ್ ಡಿಸ್ಟಿಕ್ 317ಎಫ್ ವತಿಯಿಂದ ಯಲಹಂಕದ ಮಧುರ ಮಿಲನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ನೂತನ ಸದಸ್ಯರ ಪ್ರಮಾಣವಚನ ಸಮಾರಂಭದಲ್ಲಿ ಮಾತನಾಡಿ, ಪರಿಸರ ಸಂರಕ್ಷಣೆ, ಆರೋಗ್ಯ, ಶಿಕ್ಷಣದಂತಹ ಬಹುಮುಖ್ಯ ಕ್ಷೇತ್ರಗಳ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕರ ಕೊಡುಗೆ ಅತಿಮುಖ್ಯ ಎಂದರು.
ಕಾರ್ಯಕ್ರಮದ ಅಂಗವಾಗಿ ವಿಕಲಚೇತನ ವಿದ್ಯಾರ್ಥಿಗಳ ಹಾಸ್ಟೆಲ್,ಗ್ರಂಥಾಲಯ, ಉಪನ್ಯಾಸಕ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಹಾಗೂ ಅನಾರೋಗ್ಯಕ್ಕೆ ತುತ್ತಾಗಿರುವ ಹೇಮಂತ್ ಎಂಬುವವರ ಚಿಕಿತ್ಸೆಗೆ ಒಂದು ಲಕ್ಷ ರೂ. ಸಹಾಯಧನ, 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ವಿದ್ಯಾರ್ಥಿ ವೇತನ ನೀಡಲಾಯಿತು.
ಶಾಸಕ ಎಸ್.ಆರ್.ವಿಶ್ವನಾಥ್, ಲಯನ್ಸ್ ಕ್ಲಬ್ ಜಿಲ್ಲಾ ಗೌರ್ನರ್ ಸತ್ಯನಾರಾಯಣರಾಜು, ಪಿ.ಎಸ್.ರಂಗನಾಥನ್,
ವಿ.ವಿ.ಕೃಷ್ಣಾರೆಡ್ಡಿ ಇದ್ದರು.