ದೊಡ್ಡಬಳ್ಳಾಪುರ : ಜನರಲ್ಲಿ ಕಾನೂನು ಅರಿವಿನ ಕೊರತೆ ಯಿಂದಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಹೀಗಾಗಿ ಪ್ರತಿ ಯೊಬ್ಬರೂ ಕಾನೂನು ಬಗ್ಗೆ ಅರಿಯುವ ಅನಿವಾರ್ಯವಿದ್ದು, ಕಾನೂನು ಸೇವೆಗಳ ಪ್ರಾಧಿಕಾರದಿಂದ ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿ ಸಲಾಗುತ್ತಿದೆ ಎಂದು 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯದ ನ್ಯಾಯಾಧೀಶರಾದ ಸಿ.ಚಂದ್ರಶೇಖರ್ ತಿಳಿಸಿದರು.
ನ್ಯಾಯಾಲಯದ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ತಾಲೂಕು ಕಾನೂನು ಸೇವೆಗಳ ಸಮಿತಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಿ.20ರಿಂದ 23ರವರೆಗೆ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥದ ಮೂಲಕ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸಿದರೆ ನೆಮ್ಮದಿ ಕಾಣಬಹುದು. ಕಾನೂನಿನ ಅರಿವಿಲ್ಲ ಎಂದ ಮಾತ್ರಕ್ಕೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.ಪ್ರತಿಯೊಬ್ಬರು ಕಾನೂನು ಅರಿಯುವುದರ ಜತೆಗೆ ಪಾಲನೆಗೆ ಮುಂದಾಗಬೇಕು. ಇದರಲ್ಲಿ ಸಮಾಜದ ಶಾಂತಿ, ನೆಮ್ಮದಿ ಬದುಕು ಅಡಗಿದೆ ಜನರಲ್ಲಿ ಕಾನೂನು ಅರಿವಿನ ಕೊರತೆಯಿಂದಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಅನೇಕರು ಶಿಕ್ಷೆಗೆ ಗುರಿಯಾಗುತ್ತಿದ್ದಾರೆ.
ಹೀಗಾಗಿ ಪ್ರತಿಯೊಬ್ಬರೂ ಕಾನೂನು ಬಗ್ಗೆ ಅರಿಯುವ ಅನಿವಾರ್ಯವಿದೆ. ಇಂದು ಅನೇಕ ವ್ಯಾಜ್ಯಗಳು ಕೋರ್ಟ್ ಮೆಟ್ಟಿಲೇರುತ್ತಿವೆ. ಜನರಲ್ಲಿ ಕಾನೂನು ಅರಿವಿನ ಕೊರತೆಯೇ ಇದಕ್ಕೆ ಮುಖ್ಯ ಕಾರಣವಾಗಿದ್ದು , ಶಾಲಾ ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ರೂಪಿಸಲಾಗಿದೆ. ಬಾಲ ಕಾರ್ಮಿಕ ವಿರೋ— ಕಾಯ್ದೆ, ಮೋಟಾರು ವಾಹನ ಕಾಯ್ದೆ , ಸ್ತ್ರೀ ಬ್ರೂಣ ಹತ್ಯೆ,ಹಿರಿಯ ನಾಗರಿಕರ ಹಿತರಕ್ಷಣಾ ಕಾಯ್ದೆ, ಭೂಸೂದಾರಣಾ ಕಾಯ್ದೆ ಮೊದಲಾದ ವಿವಿಧ ವಿಚಾರಗಳಿಗೆ ಸಂಬಂಧಪಟ್ಟಂತೆ ಇರುವ ಕಾನೂನುಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ತಿಳಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಉಪವಿಭಾಗಾಧಿಕಾರಿ ಸಿ.ಮಂಜುನಾಥ್ ಮಾತ ನಾಡಿ, ಈ ದೇಶದ ಕಾನೂನುಗಳನ್ನು ನಾವು ಪರಿಪಾಲನೆ ಮಾಡಲೇಬೇಕು. ಇಲ್ಲದಿದ್ದರೆ ನಮ್ಮ ಹಕ್ಕುಗಳಿಂದ ವಂಚಿತರಾಗಬೇಕಾಗುತ್ತದೆ. ಕಾನೂನು ನಮ್ಮ ವಿರುದ್ಧವಾಗಿ ಅಲ್ಲ ನಮ್ಮ ರಕ್ಷಣೆಗಾಗಿಯೇ ಇವೆ. ತಪ್ಪಿತಸ್ಥರಿಗೆ ಶಿಕ್ಷೆಕೂಡ ಕಾನೂನಿನಿಂದ ಸಾಧ್ಯವಾಗುತ್ತದೆ. ಇದರ ಮುಂದೆ ಎಲ್ಲರೂ ಸಮಾನರು.
ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ಸರ್ವರಿಗೂ ಸಮಬಾಳು, ಸರ್ವರಿಗೂ ಸಮನ್ಯಾಯವೆಂಬ ಘೋಷವಾಕ್ಯದೊಂದಿಗೆ ಗ್ರಾಮೀಣರಿಗೂ ಅರಿವು ಮೂಡಿಸುವ ಹಾಗೂ ನೊಂದವರಿಗೆ ಕಾನೂನು ಆಸರೆ ಇದೆ ಎಂಬ ಉದ್ದೇಶ ದಿಂದ ಈ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿ ಕೊಂಡಿರುವುದು ಅರ್ಥಪೂರ್ಣವಾಗಿದೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಬಿ.ಕುಲಕರ್ಣಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೀಪ್‌ಎ.ನಾಯಕ್, ಅಪರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ
ಮಮತ ಶಿವಪೂಜಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರಾ.ಬೈರೇಗೌಡ, ತಹಶೀàಲ್ದಾರ್ ಟಿ.ಎಸ್.ಶಿವರಾಜ್, ಸಹಾಯಕ ಸರ್ಕಾರಿ ಅಭಿಯೋಜಕ ಸಿ.ಜೆ.ಸುಬ್ರಮಣ್ಯ ಹಾಜರಿದ್ದರು.