Advertisement

ದೇಶದ ಉನ್ನತಿಗಾಗಿ ಪ್ರತಿಯೊಬ್ಬರೂ ಮತ ಚಲಾಯಿಸಿ

09:38 PM Mar 23, 2019 | Team Udayavani |

ದಾವಣಗೆರೆ: ದೇಶದ ಉನ್ನತಿಗಾಗಿ ಪ್ರತಿ ಮತದಾರ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಎ.ಆರ್‌.ಜಿ ಕಾಲೇಜು ಪ್ರಾಂಶುಪಾಲ ಪ್ರೊ| ಕೆ.ಎಸ್‌. ಬಸವರಾಜಪ್ಪ ಮನವಿ ಮಾಡಿದರು.

Advertisement

ಎ.ಆರ್‌.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸ್ವೀಪ್‌ ಕಾರ್ಯಕ್ರಮದಡಿ ಮತದಾನ ಜಾಗೃತಿ ಅಂಗವಾಗಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹಣಾ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಮತದಾರರು ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ನಿರ್ವಹಿಸಬೇಕಾಗಿರುವುದು ಅತ್ಯವಶ್ಯಕ ಎಂದರು.

ಮತದಾನ, ಚುನಾವಣೆ ಮತ್ತು ಪಕ್ಷಗಳ ಸಿದ್ಧಾಂತಗಳ ಗುಣಮಟ್ಟ ಪ್ರಜಾಪ್ರಭುತ್ವದ ಯಶಸ್ಸು ಅಥವಾ ವೈಫಲ್ಯವನ್ನು ನಿರ್ಧರಿಸುತ್ತದೆ ಎಂದು ತಿಳಿಸಿದರು. ಕಾಲೇಜಿನ ಸ್ವೀಪ್‌ ನೋಡಲ್‌ ಅಧಿಕಾರಿ ಡಾ| ಜೆ.ಕೆ. ಮಲ್ಲಿಕಾರ್ಜುನಪ್ಪ ಮಾತನಾಡಿ, ಯುವಕರು ಸಂಪೂರ್ಣ ಪ್ರಮಾಣದಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಲ್ಲದೇ ತಮ್ಮ ಸುತ್ತಮುತ್ತಲಿನ ಮತದಾರರನ್ನು ಕಡ್ಡಾಯವಾಗಿ ಮತದಾನ
ಮಾಡುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಮತದಾನ ಮತ್ತು ಚುನಾವಣೆ ಕುರಿತಂತೆ ಗೀತೆಗಳು, ಘೋಷಣೆಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಜಾಥಾ ನಡೆಸಿ ಮತದಾನ ಜಾಗೃತಿ, ಅರಿವು ಮೂಡಿಸಿದರು. ಎನ್‌.ಎಸ್‌.ಎಸ್‌ ಕಾರ್ಯಕ್ರಮಾಧಿಕಾರಿ ಪ್ರೊ| ಮಲ್ಲಿಕಾರ್ಜುನ ಹಲಸಂಗಿ, ಐಕ್ಯೂಎಸಿ ಸಂಯೋಜಕಿ ಪ್ರೊ| ಅನಿತಾಕುಮಾರಿ , ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next