Advertisement

“ರಾಷ್ಟ್ರ ನಿರ್ಮಾಣದಲ್ಲಿ ಎಲ್ಲರೂ ಕೈ ಜೋಡಿಸಿ’

05:03 PM Mar 18, 2017 | Team Udayavani |

ಕುಂದಾಪುರ:  ಭಾರತೀಯ ಸಂಸ್ಕೃತಿ ಸಂಸ್ಕಾರವನ್ನು ಉಳಿಸಲು ಮಾತೆಯರು ಮುಂದಾಗಬೇಕು. ಹೆಣ್ಣು ಮಕ್ಕಳಿಗೆ ಬಾಲ್ಯದಲ್ಲಿ ನಮ್ಮ ಹಿಂದೂ ಸಂಸ್ಕೃತಿ, ಆಚಾರ ವಿಚಾರಗಳನ್ನು ಮನದಟ್ಟು ಮಾಡಬೇಕು. ಬಲಿಷ್ಠ ಹಿಂದೂ ಸಮಾಜ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಎಲ್ಲರೂ ಕೈ ಜೋಡಿಸಬೇಕು. ದೇಶದ ಭದ್ರತೆ ಹಾಗೂ ಭಯೋತ್ಪಾದನೆ ವಿಚಾರದಲ್ಲಿ ಎಲ್ಲರೂ ಜಾತಿ ಮತಭೇದ ಮರೆತ‌ು ದೇಶವನ್ನು ಕಾಪಾಡಲು ಒಂದಾಗಬೇಕು ಎಂದು ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಸಂಚಾಲಕ ಅರವಿಂದ ಕೋಟೇಶ್ವರ ಹೇಳಿದರು.

Advertisement

ಅವರು ಗಂಗೊಳ್ಳಿಯ  ಸ್ಫೂಧಿರ್ತಿ ಮಹಿಳಾ ಘಟಕದ ಆಶ್ರಯದಲ್ಲಿ ಗಂಗೊಳ್ಳಿ ದೊಡ್ಡಹಿತ್ಲು ವಠಾರದಲ್ಲಿ ಜರಗಿದ ಸಂದೀಪ್‌ ಉನ್ನಿಕೃಷ್ಣನ್‌ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ನಮ್ಮ ದೇಶದಲ್ಲಿ ನಾವು ಸುರಕ್ಷಿತವಾಗಿರಬೇಕಿದ್ದರೆ ನಮ್ಮ ದೇಶದ ಗಡಿಯನ್ನು ಕಾಯುತ್ತಿ ರುವ ಯೋಧರು ಮುಖ್ಯ ಕಾರಣ. ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಅವರ ದೇಶ ಸೇವೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ ಎಂದರು.

ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಸಹಸಂಚಾಲಕ ವಾಸು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಗಂಗೊಳ್ಳಿಯ ಉದ್ಯಮಿ ಎಂ.ಜಿ. ರಾಘವೇಂದ್ರ ಭಂಡಾರ್‌ಕಾರ್‌ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೋಹನ ಖಾರ್ವಿ ಶುಭ ಹಾರೈಸಿದರು. ಸ್ಫೂರ್ತಿ ಮಹಿಳಾ ಘಟಕದ ಅಧ್ಯಕ್ಷೆ ಅರ್ಚನಾ ಉಪಸ್ಥಿತರಿದ್ದರು. ದೀಕ್ಷಿತಾ ಸ್ವಾಗತಿಸಿ, ನಿರೂಷಾ ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next