ಚಿಕ್ಕಬಳ್ಳಾಪುರ: ಕಳೆದ ಚುನಾವಣೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೆಲ್ಲ ಉಲ್ಟಾ ಆಗಿದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದಿಲ್ಲ ಎಂದರು. ಆದರೆ, ಇವರೇ ಅವರ ಮನೆ ಬಾಗಿಲಿಗೆ ಹೋಗಿ ಕರೆತಂದು ಮುಖ್ಯಮಂತ್ರಿ ಮಾಡಿದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದೇ ಇಲ್ಲ ಎಂದರು.
ಅದೂ ಆಯಿತು. ಈಗ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುತ್ತಿದ್ದಾರೆ, ಅದೂ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.
ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷ ಕಾಳೇಗೌಡ ನಿವಾಸಕ್ಕೆ ಭೇಟಿ ನೀಡಿ, ಅವರನ್ನು ಅಭಿನಂದಿಸಿ ಮಾತನಾಡಿ, ಸಿದ್ದರಾಮಯ್ಯ ಅವರ ತಪ್ಪನ್ನು ಈವರೆಗೆ ಯಾರೂ ಎತ್ತಿ ತೋರಿಸಿರಲಿಲ್ಲ. ತಾವು ತೋರಿಸಿದ ಕಾರಣಕ್ಕೆ ಅವರಿಗೆ ಸಿಟ್ಟು ಬಂದಿದೆ. ಆರ್‌ಎಸ್‌ಎಸ್‌ನವರು ಹೇಳಿಸಿದ್ದಾರೆ
ಎನ್ನುತ್ತಿದ್ದಾರೆ. ನಮ್ಮ ಪಕ್ಷದವರು ಮಾತಾಡಿಸಿದರೆ ತಪ್ಪೇನು? ಅವರನ್ನೂ ಮಾತನಾಡಿಸುತ್ತಿರುವುದು ಕಾಂಗ್ರೆಸ್‌ನವರೇ ಅಲ್ಲವೇ ಎಂದು ತಿರುಗೇಟು ನೀಡಿದರು.
Related Articles
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಮುಖಂಡರು, ಕಾರ್ಯಕರ್ತರು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸುವಂತೆ ಸಲಹೆ ನೀಡಿದರು.